ಸ್ಯಾಂಡಲ್‍ವುಡ್ ಡ್ರಗ್ಸ್ ಜಾಲ- ನಟಿ ಸಂಜನಾ ಗಲ್ರಾನಿಗೆ 2 ದಿನ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್ ಆದೇಶ…

164
firstsuddi

ಬೆಂಗಳೂರು : ಸ್ಯಾಂಡಲ್ವುಡ್ ಡ್ರಗ್ಸ್ ಜಾಲದ ನಂಟು ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ಸಂಜನಾ ಗಲ್ರಾನಿಗೆದಿನಗಳ ನ್ಯಾಯಾಂಗ ಬಂಧನ ವಿಧಿಸಿ ನ್ಯಾಯಾಲಯ ಆದೇಶ ಹೊರಡಿಸಿದೆ. ಇಂದಿಗೆ ನಟಿ ಸಂಜನಾ ಗಲ್ರಾನಿಯ ಸಿಸಿಬಿ ಕಸ್ಟಡಿ ಅಂತ್ಯವಾದ ಹಿನ್ನೆಲೆ, ಪೊಲೀಸರು ಸಂಜನಾ ಗಲ್ರಾನಿ ಅವರನ್ನು ವೀಡಿಯೋ ಕಾನ್ಫರೆನ್ಸ್ ಮೂಲಕ ಬೆಂಗಳೂರಿನ 1ನೇ ಎಸಿಎಂಎಂ ನ್ಯಾಯಾಲಯಕ್ಕೆ ಹಾಜರುಪಡಿಸಿದರು. ಕುರಿತು ವಿಚಾರಣೆ ನಡೆಸಿದ ನ್ಯಾಯಾಲಯ ಸಂಜನಾ ಗಲ್ರಾನಿಗೆ 2 ದಿನಗಳ ನ್ಯಾಯಾಂಗ ಬಂಧನ ವಿಧಿಸಿ  ಈ ಪ್ರಕರಣವನ್ನು 1ನೇ ಎಸಿಎಂಎಂ ಕೋರ್ಟ್​ನಿಂದ 33 ನೇ ಎಸಿಎಂಎಂಗೆ ವರ್ಗಾಯಿಸಿ ಆದೇಶ ಹೊರಡಿಸಲಾಗಿದೆ. ಸೆ.18 ರಂದು ಸಂಜನಾರನ್ನು ವಿಶೇಷ ಕೋರ್ಟ್ ಗೆ ಹಾಜರುಪಡಿಸಲು ಸೂಚನೆ ನೀಡಲಾಗಿದ್ದು, ಜಾಮೀನು ಅರ್ಜಿಯನ್ನು ಅಲ್ಲಿಯೇ ತೀರ್ಮಾನ ಮಾಡುವಂತೆ ಆದೇಶದಲ್ಲಿ ತಿಳಿಸಲಾಗಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳಾದ ವೀರೇನ್ ಖನ್ನಾ, ರವಿಶಂಕರ್‌ಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ನ್ಯಾಯಾಲಯ ಆದೇಶ ಹೊರಡಿಸಿದೆ.