ಸ್ಯಾಂಡಲ್‍ವುಡ್ ಡ್ರಗ್ಸ್ ಜಾಲ-ನಟ ಅಕುಲ್ ಬಾಲಾಜಿ, ಸಂತೋಷ್ ಕುಮಾರ್ ಸೇರಿದಂತೆ ಮೂವರಿಗೆ ಸಿಸಿಬಿ ನೊಟೀಸ್…

148
firstsuddi

ಬೆಂಗಳೂರು : ಸ್ಯಾಂಡಲ್‍ವುಡ್ ಡ್ರಗ್ಸ್ ಜಾಲ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ಇಂದು ಮತ್ತೆ ಮೂವರಿಗೆ ನೋಟೀಸ್ ನೀಡಿದ್ದಾರೆ. ಸ್ಯಾಂಡಲ್‍ವುಡ್ ನಟ, ನಿರೂಪಕ ಅಕುಲ್ ಬಾಲಾಜಿ, ಸಂತೋಷ್ ಕುಮಾರ್ ಹಾಗೂ ಮಾಜಿ ಶಾಸಕ ಆರ್.ವಿ ದೇವರಾಜ್ ಅವರ ಪುತ್ರ ಯುವರಾಜ್ ಆರ್. ವಿ ಈ ಮೂವರಿಗೆ ನಾಳೆ ಬೆಳಿಗ್ಗೆ 10 ಗಂಟೆಗೆ ವಿಚಾರಣೆಗೆ ಹಾಜರಾಗಲು ಸಿಸಿಬಿ ಪೊಲೀಸರು ವಾಟ್ಸಾಪ್ ಮುಖಾಂತರ ನೊಟೀಸ್ ನೀಡಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ ಪ್ರತಿಕ್ರಯಿಸಿದ ನಟ ಅಕುಲ್ ಬಾಲಾಜಿ ಅವರು, ನಾನು ಸದ್ಯ ಹೈದರಾಬಾದ್‍ನಲ್ಲಿ ಇದ್ದೇನೆ. ನನಗೆ ಸಿಸಿಬಿಯಿಂದ ನೊಟೀಸ್ ಸಿಕ್ಕಿದ್ದು, ನಾಳೆ ವಿಚಾರಣೆಗೆ ಹಾಜರಾಗಲು ತಿಳಿಸಿದ್ದಾರೆ. ನಾಳೆ ಬೆಂಗಳೂರಿಗೆ ಬಂದು ವಿಚಾರಣೆಗೆ ಹಾಜರಾಗುತ್ತೇನೆ ಎಂದು ತಿಳಿಸಿದ್ದಾರೆ.

ನಟ ಸಂತೋಷ್ ಅವರು ಕೂಡಾ ಸುದ್ದಿಗಾರರೊಂದಿಗೆ ಮಾತನಾಡಿದ್ದು, ನಾನು ಸಂಬಂಧಿಕರ ಮನೆ ಕಾರ್ಯಕ್ರಮದ ಅಂಗವಾಗಿ ಮೈಸೂರಿನಲ್ಲಿ ಇದ್ದೇನೆ. ನನಗೆ ಸಿಸಿಬಿ ನೋಟೀಸ್ ಸಿಕ್ಕಿದೆ. ನಾಳೆ ವಿಚಾರಣೆಗೆ ಹಾಜರಾಗುತ್ತೇನೆ ಎಂದು ಹೇಳಿದ್ದಾರೆ.