ದೇಶದಲ್ಲಿ ಒಂದೇ ದಿನ 93,337 ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 53,08,015ಕ್ಕೆ ಏರಿಕೆ…

121
firstsuddi

ನವದೆಹಲಿ : ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ ದೇಶದಲ್ಲಿ 93,337 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದ್ದು, ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 53,08,015ಕ್ಕೆ ಏರಿಕೆಯಾಗಿದೆ. ಅಲ್ಲದೇ ನಿನ್ನೆ ಒಂದೇ ದಿನ 1,247 ಮಂದಿ ಸೋಂಕಿಗೆ ಬಲಿಯಾಗಿದ್ದು, ಮೃತರ ಸಂಖ್ಯೆ 85,619 ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 53,08,015ಮಂದಿ ಸೋಂಕಿತರ ಪೈಕಿ 42,08,432 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ದೇಶದಲ್ಲಿ ಇನ್ನೂ 10,13,964 ಮಂದಿ ಸೋಂಕಿತರು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದು ಬಂದಿದೆ.