ನಿಂತಿದ್ದ ಲಾರಿಗೆ ಕಾರು ಡಿಕ್ಕಿ-ಇಬ್ಬರು ಸ್ಥಳದಲ್ಲೇ ಸಾವು…

106
firstsuddi

ತುಮಕೂರು : ರಸ್ತೆ ಬದಿ ನಿಂತಿದ್ದ ಲಾರಿಗೆ ಇನೋವಾ ಕಾರು ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಮಧುಗಿರಿ ತಾಲ್ಲೂಕಿನಲ್ಲಿ ನಡೆದಿದೆ. ಪಾವಗಡ ಮೂಲದ ದುಗ್ಗಪ್ಪ(21) ಹಾಗೂ ನರಸಿಂಹಮೂರ್ತಿ(22) ಮೃತ ದುರ್ದೈವಿಗಳು ಎಂದು ಗುರುತಿಸಲಾಗಿದೆ. ನಿನ್ನೆ ತಡರಾತ್ರಿ ಮೃತರು ಕಾರಿನಲ್ಲಿ ಬೆಂಗಳೂರಿಗೆ ತೆರಳುತ್ತಿದ್ದ ವೇಳೆ ರಸ್ತೆ ಬದಿ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದಿದ್ದು, ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಮತ್ತೋರ್ವ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರು ಡಿಕ್ಕಿ ಹೊಡೆದ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ಜಖಂ ಆಗಿದ್ದು, ಈ ಕುರಿತು ಮಿಡಿಗೇಶಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.