ರಾಜ್ಯದ ಹಲವೆಡೆ ಮುಂದಿನ ಎರಡು ದಿನಗಳ ಭಾರೀ ಮಳೆ-ಹವಾಮಾನ ಇಲಾಖೆ ಸೂಚನೆ…

142
firstsuddi

ಬೆಂಗಳೂರು : ರಾಜ್ಯದಲ್ಲಿ ಮುಂದಿನ ಎರಡು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ಈಗಾಗಲೇ ರಾಜ್ಯದ ಹಲವೆಡೆ ಭಾರಿ ಮಳೆಯಾಗುತ್ತಿದ್ದು, ಅಪಾರ ಪ್ರಮಾಣದ ಹಾನಿಗಳು ಉಂಟಾಗಿದ್ದು, ಈ ನಡುವೆ ಮತ್ತೆ ಹವಾಮಾನ ಇಲಾಖೆಯಿಂದ ಭಾರೀ ಮಳೆಯಾಗುವ ಸೂಚನೆಯನ್ನು ನೀಡಲಾಗಿದೆ. ಈಗಾಗಲೇ ಕೊಡಗು ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿದ್ದು, ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಅಲ್ಲದೇ ಕರಾವಳಿ ಭಾಗ, ಚಿಕ್ಕಮಗಳೂರು, ಬಳ್ಳಾರಿ, ಹಾಗೂ ಧಾರವಾಡ ಜಿಲ್ಲೆಯಲ್ಲೂ ಎರಡು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.