ಉಗ್ರರು ಹಾಗೂ ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ-ಓರ್ವ ಉಗ್ರನ ಹತ್ಯೆ…

250
firstsuddi

ಶ್ರೀನಗರ : ಉಗ್ರರು ಹಾಗೂ ಭದ್ರತಾ ಪಡೆಗಳ ನಡುವೆ ಎನ್‍ಕೌಂಟರ್ ನಡೆದಿದ್ದು, ಯೋಧರು ಓರ್ವ ಉಗ್ರನನ್ನು ಹೊಡೆದುರುಳಿಸಿದ್ದಾರೆ. ಜಮ್ಮು ಕಾಶ್ಮೀರಾದ ಬುಡ್ಗಾಮ್ ಜಿಲ್ಲೆಯ ಚರಾರ್-ಐ-ಶರೀಫ್ ಎಂಬ ಪ್ರದೇಶದಲ್ಲಿ ಉಗ್ರರು ಇರುವ ಮಾಹಿತಿ ತಿಳಿದ ಯೋಧರು ಕಾರ್ಯಾಚರಣೆಗೆ ಮುಂದಾಗಿದ್ದರು. ಈ ವೇಳೆ ಉಗ್ರರು ಏಕಾಎಕಿ ಯೋಧರತ್ತ ಗುಂಡಿನ ದಾಳಿ ನಡೆಸಿದ್ದಾರೆ. ಇದಕ್ಕೆ ಪ್ರತಿಯಾಗಿ ದಾಳಿ ನಡೆಸಿದ ಯೋಧರು ಓರ್ವ ಉಗ್ರನನ್ನು ಹೊಡೆದುರುಳಿಸುವಲ್ಲಿ ಯಶಸ್ವಿಯಾಗಿದ್ದು, ಘಟನಾ ಸ್ಥಳದಲ್ಲಿ ಇನ್ನೂ ಕೆಲವು ಉಗ್ರರಿಗಾಗಿ ಕಾರ್ಯಾಚರಣೆ ಮುಂದುವರೆದಿದೆ ಎಂದು ಕಾಶ್ಮೀರ ಪೊಲೀಸ್ ಮೂಲಗಳಿಂದ ತಿಳಿದು ಬಂದಿದೆ.