ಕೋವಿಡ್-19 ನಿಯಮಗಳಂತೆ ದೆಹಲಿಯಲ್ಲೇ ಕೇಂದ್ರ ಸಚಿವ ಸುರೇಶ್ ಅಂಗಡಿ ಅವರ ಅಂತ್ಯಕ್ರಿಯೆ…

140
firstsuddi

ನವದೆಹಲಿ : ಕೊರೊನಾ ಸೋಂಕಿನಿಂದ ನಿಧನರಾದ ಕೇಂದ್ರ ಸಚಿವ ಸುರೇಶ್ ಅಂಗಡಿ ಅವರ ಅಂತ್ಯಕ್ರಿಯೆ ದೆಹಲಿಯಲ್ಲೇ ಲಿಂಗಾಯತ ಸಂಪ್ರದಾಯದಂತೆ ನಡೆಯಲಿದೆ. ಸಚಿವರ ಪಾರ್ಥೀವ ಶರೀರವನ್ನು ಬೆಳಗಾವಿಗೆ ತಂದು ಅಂತ್ಯಕ್ರಿಯೆ ನಡೆಸಬೇಕು ಎಂದು ಕುಟುಂಬಸ್ಥರು ಹಾಗೂ ಬೆಂಬಲಿಗರ ಆಸೆಯಾಗಿತ್ತು. ರಾಜ್ಯ ಸರ್ಕಾರ ಕೂಡಾ ಸಾಕಷ್ಟು ಪ್ರಯತ್ನ ನಡೆಸಿತ್ತು. ಆದರೆ ಕೋವಿಡ್-19 ನಿಯಮಗಳಿಂದ ಪಾರ್ಥೀವ ಶರೀರವನ್ನು ಬೆಳಗಾವಿಗೆ ತರಲು ಅವಕಾಶ ಸಿಗುತ್ತಿಲ್ಲ. ಆದ್ದರಿಂದ ಸಚಿವರ ಅಂತ್ಯಕ್ರಿಯೆಯಲ್ಲಿ ಕುಟುಂಬಸ್ಥರಿಗೆ ಮಾತ್ರ ಭಾಗವಹಿಸಲು ಅವಕಾಶವಿದ್ದು, ಇಂದು ಸಂಜೆ 4 ಗಂಟೆಗೆ ದೆಹಲಿಯ ಧ್ವಾರಕಾ ಸೆಕ್ಟರ್ 24ರಲ್ಲಿ ಲಿಂಗಾಯತ ಸಂಪ್ರದಾಯದಂತೆ ಅಂತ್ಯಕ್ರಿಯೆ ನೆರವೇರಿಸಲು ನಿರ್ಧರಿಸಲಾಗಿದೆ.