ಚಿತ್ರೀಕರಣದ ವೇಳೆ ಕುಸಿದು ಬಿದ್ದು ಸ್ಯಾಂಡಲ್‍ವುಡ್ ಹಿರಿಯ ನಟ ರಾಕ್‍ಲೈನ್ ಸುಧಾಕರ್ ನಿಧನ…

170
firstsuddi

ಬೆಂಗಳೂರು : ಸ್ಯಾಂಡಲ್‍ವುಡ್‍ನ ಹಿರಿಯ ನಟ ರಾಕ್‍ಲೈನ್ ಸುಧಾಕರ್ ಅವರು ಇಂದು ಹೃದಯಾಘಾತದಿಂದ ನಿಧನರಾಗಿದ್ದಾರೆ. ಇತ್ತೀಚೆಗಷ್ಟೆ ಕೊರೊನಾ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದ ರಾಕ್‍ಲೈನ್ ಸುಧಾಕರ್ ಅವರು ಸಿನಿಮಾ ಕೆಲಸಗಳಲ್ಲಿ ತೊಡಗಿಕೊಂಡಿದ್ದರು. ಇಂದೂ ಕೂಡಾ ಚಿತ್ರೀಕರಣದಲ್ಲಿ ತೊಡಗಿಕೊಂಡಿದ್ದಾಗ ಸಿನಿಮಾ ಚಿತ್ರೀಕರಣ ನಡೆಯುತ್ತಿದ್ದ ವೇಳೆಯೇ ಸುಧಾಕರ್ ಅವರು ಕುಸಿದು ಬಿದ್ದು ಮೃತಪಟ್ಟಿದ್ದಾರೆ. ಸುಧಾಕರ್ ಅವರು ಸ್ಯಾಂಡಲ್‍ವುಡ್‍ನ ಉಡುಂಬಾ, ಪಟಾಕಿ, ಜೂಮ್ ಸಿನಿಮಾ ಸೇರಿದಂತೆ 50ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದಾರೆ.