ಉಡುಪಿ: ಹಾಡಹಗಲೇ ರಸ್ತೆಯಲ್ಲಿ ವ್ಯಕ್ತಿಯೋರ್ವನನ್ನು ಕತ್ತು ಕೊಯ್ದು ಕೊಲೆ ಮಾಡಿರುವ ಘಟನೆ ಹಿರಿಯಡ್ಕ ಪೇಟೆಯಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಕಿಶನ್ ಹೆಗ್ಡೆ ಎಂದು ಗುರುತಿಸಲಾಗಿದೆ. ಈತ ರಿಯಲ್ ಎಸ್ಟೇಟ್ ಉದ್ಯಮವನ್ನು ನಡೆಸುತ್ತಿದ್ದ ಎನ್ನಲಾಗಿದೆ. ಮಾಹಿತಿಗಳ ಪ್ರಕಾರ ಎರಡು ಕಾರುಗಳಲ್ಲಿ ಹಿಂಬಾಲಿಸಿಕೊಂಡು ಬಂದ ತಂಡ ಕಿಶನ್ ಹೆಗ್ಡೆಯನ್ನು ಅಡ್ಡಗಟ್ಟಿ ಕೊಲೆ ಮಾಡಿದ್ದಾರೆ ಎನ್ನಲಾಗಿದೆ. ಮೃತ ಕಿಶನ್ ಹೆಗ್ಡೆ ಅಪರಾಧಿ ಹಿನ್ನಲೆಯನ್ನು ಉಳ್ಳವನಾಗಿದ್ದು, ಸ್ಥಳದಲ್ಲಿ ನೂರಾರು ಸಂಖ್ಯೆಯಲ್ಲಿ ಜನರು ಜಮಾಯಿಸಿ ಮರಣೋತ್ತರ ಪರೀಕ್ಷೆಗೆ ಮೃತದೇಹವನ್ನು ಮಣಿಪಾಲಕ್ಕೆ ರವಾನಿಸಲಾಗಿದೆ.










