ಬೆಂಗಳೂರು : ಮಹಾಮಾರಿ ಕೊರೊನಾ ಸೋಂಕಿನಿಂದ ಬೀದರ್ ನ ಬಸವಕಲ್ಯಾಣ ಕಾಂಗ್ರೆಸ್ ಶಾಸಕ ಬಿ. ನಾರಾಯಣರಾವ್(65) ಇಂದು ನಿಧನರಾಗಿದ್ದಾರೆ. ಕೊರೊನಾ ಸೋಂಕಿಗೆ ತುತ್ತಾಗಿದ್ದ ಶಾಸಕ ನಾರಾಯಣರಾವ್ ಅವರು ಕಳೆದ 2 ವಾರಗಳಿಂದ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ವೆಂಟಿಲೇಟರ್‍ನಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಮಧ್ಯಾಹ್ನ 3:55ರ ಸುಮಾರಿಗೆ ಆಸ್ಪತ್ರೆಯಲ್ಲೇ ವಿಧಿವಶರಾಗಿದ್ದಾರೆ.










