ಖ್ಯಾತ ಗಾಯಕ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯ ಸ್ಥಿತಿ ಗಂಭೀರ…

142
firstsuddi

ಚೆನ್ನೈ : ಖ್ಯಾತ ಗಾಯಕ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಚೆನ್ನೈನ ಎಂಜಿಎಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ. ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರು ಕೊರೊನಾ ಸೋಂಕಿನಿಂದ ಆಗಸ್ಟ್. 5ರಂದು ಚೆನ್ನೈನ ಎಂಜಿಎಂ ಆಸ್ಪತ್ರೆಗೆ ದಾಖಲಾಗಿದ್ದರು. ಬಳಿಕ ಕಳೆದ ಕೆಲವು ದಿನಗಳ ಹಿಂದೆ ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯ ಸ್ಥಿತಿ ಬಗ್ಗೆ ಮಾಹಿತಿ ನೀಡಿದ್ದ ಪುತ್ರ ಎಸ್.ಪಿ.ಬಿ ಚರಣ್ ಅವರು ತಂದೆಯ ಆರೋಗ್ಯ ಸ್ಥಿರವಾಗಿದ್ದು, ಕೋವಿಡ್-19 ವರದಿ ನೆಗೆಟಿವ್ ಬಂದಿದೆ. ಆದರೆ ವೆಂಟಿಲೇಟರ್‍ನಲ್ಲಿ ಚಿಕಿತ್ಸೆ ಮುಂದುವರೆದಿದೆ. ಅವರಿಗೆ ಶ್ವಾಸಕೋಶ ಹಾಗೂ ಉಸಿರಾಟದಲ್ಲಿ ಇನ್ನೂ ಸ್ವಲ್ಪ ವೃದ್ಧಿಯಾಗಬೇಕಿದೆ ಎಂದು ಮಾಹಿತಿ ನೀಡಿದ್ದರು. ಆದರೆ ಇಂದು ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯ ಸ್ಥಿತಿ ತುಂಬಾ ಗಂಭೀರವಾಗಿದ್ದು, ಆಸ್ಪತ್ರೆಯ ಬಳಿ ಕುಟುಂಬಸ್ಥರು, ಅಭಿಮಾನಿಗಳು ಹಾಗೂ ಆಪ್ತರು ಜಮಾಯಿಸಿದ್ದಾರೆ.