ಚಿಕ್ಕಮಗಳೂರು : ವಿವಿಧ ಕಾಯ್ದೆಗಳಿಗೆ ತಿದ್ದುಪಡಿ ತಂದು ರೈತ ವಿರೋಧಿ ನೀತಿ ಅನುಸರಿಸುತ್ತಿರುವ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ವಿರುದ್ಧ ಸೆ. 28ರಂದು ವಿವಿಧ ಸಂಘಟನೆಗಳು ಕರೆ ನೀಡಿರುವ ರಾಜ್ಯ ಬಂದ್ಗೆ ಜಿಲ್ಲೆಯಲ್ಲಿ ಬೆಂಬಲ ಸೂಚಿಸಲು ವಿವಿಧ ಸಂಘಟನೆಗಳ ಮುಖಂಡರುಗಳು ಸಭೆಯಲ್ಲಿ ನಿರ್ಧರಿಸಲಾಗಿದೆ.
ನಗರದ ಪ್ರವಾಸಿ ಮಂದಿರದಲ್ಲಿ ವಿವಿಧ ರಾಜಕೀಯ ಪಕ್ಷಗಳ, ಕನ್ನಡ ದಲಿತ ಪರ ಮತ್ತು ಪ್ರಗತಿಪರ ಸಂಘಟನೆಗಳ ಮುಖಂಡರುಗಳು ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದ್ದು, ಬೆಳಿಗ್ಗೆ 6ರಿಂದ ಸಂಜೆ 6ರ ತನಕ ಜಿಲ್ಲೆಯಲ್ಲಿ ಬಂದ್ಗೆ ಕರೆ ನೀಡಲಾಗಿದೆ.
ನಗರದ ಪ್ರವಾಸಿ ಮಂದಿರದಲ್ಲಿ ಏರ್ಪಡಿಸಲಾಗಿದ್ದ ಸಭೆಯಲ್ಲಿ ಜೆಡಿಎಸ್ ರಾಜ್ಯ ಉಪಾಧ್ಯಕ್ಷರಾದ ಹೆಚ್.ಹೆಚ್. ದೇವರಾಜ್, ಸಿ.ಪಿ.ಐ. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹೆಚ್.ಎಂ ರೇಣುಕಾರಾಧ್ಯ, ಬಿ.ಎಸ್.ಪಿ ಜಿಲ್ಲಾಧ್ಯಕ್ಷ ಕೆ.ಟಿ. ರಾಧಾಕೃಷ್ಣ, ರೈತ ಸಂಘದ ಗುರುಶಾಂತಪ್ಪ, ಆರ್.ಆರ್. ಮಹೇಶ್, ದುಗ್ಗಪ್ಪಗೌಡ, ಕಾಂಗ್ರೇಸ್ನ ರವೀಶ್ ಬಸಪ್ಪ ಅಣ್ಣಯ್ಯ ಹಾಗೂ ಎಸ್.ಡಿ.ಪಿ.ಐ, ವಿವಿಧ ಕನ್ನಡ ಪರ ಸಂಘಟನೆಗಳ ಮುಖಂಡರುಗಳು ಬಾಗವಹಿಸಿ ಬಂದ್ ಕುರಿತು ಚರ್ಚೆ ನಡೆಸಿದರು.










