ಚಿಕ್ಕಮಗಳೂರು : ಸಾಲಬಾಧೆ ತಾಳಲಾಗದೆ ರೈತ ಆತ್ಮಹತ್ಯೆಗೆ ಶರಣು…

123
firstsuddi

ಚಿಕ್ಕಮಗಳೂರು : ರಾಜ್ಯದಲ್ಲಿ ರೈತರು ಕೃಷಿ ಮಸೂದೆಯನ್ನು ವಿರೋಧಿಸಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಹೋರಾಟ ನಡೆಸುತ್ತಿರುವ ಬೆನ್ನಲ್ಲೇ ಸಾಲಬಾಧೆ ತಾಳಲಾಗದೆ ರೈತ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯ ಸಖರಾಯಪಟ್ಟಣ ತಾಲ್ಲೂಕಿನ ಕೆಂಗೇನಹಳ್ಳಿಯಲ್ಲಿ ನಡೆದಿದೆ. ಮಲ್ಲೇಶ್(50) ಆತ್ಮಹತ್ಯೆಗೆ ಶರಣಾದ ರೈತ ಎಂದು ಗುರುತಿಸಲಾಗಿದೆ. ಮೃತ ರೈತ ಕೆನರಾ ಬ್ಯಾಂಕ್ ಹಾಗೂ ಕೈಸಾಲ ಸೇರಿ ಒಟ್ಟು 11 ಲಕ್ಷ ರೂ. ಸಾಲ ಮಾಡಿಕೊಂಡಿದ್ದರು. ರೈತ ಈ ಬಾರಿ ತಮ್ಮ ಹೊಲದಲ್ಲಿ ಆಲೂಗಡ್ಡೆ ಬೆಳೆಯನ್ನು ಹಾಕಿದ್ದರು. ಆದರೆ ಆಲೂಗಡ್ಡೆ ಬೆಳೆ ರೈತನ ಕೈ ಹಿಡಿಯದ ಹಿನ್ನೆಲೆ ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಕುರಿತು ಸಖರಾಯಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.