ಕಾಂಗ್ರೆಸ್‍ನ ಹಿರಿಯ ಶಾಸಕ ಹೆಚ್.ಕೆ. ಪಾಟೀಲ್ ಅವರಿಗೆ ಕೊರೊನಾ ದೃಢ…

150
firstsuddi

ಬೆಂಗಳೂರು : ಕಾಂಗ್ರೆಸ್‍ನ ಹಿರಿಯ ಶಾಸಕ ಹೆಚ್.ಕೆ. ಪಾಟೀಲ್ ಅವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದೆ. ತಮಗೆ ಸೋಂಕು ತಗುಲಿರುವ ಬಗ್ಗೆ ಸ್ವತಃ ಶಾಸಕರೇ ತಮ್ಮ ಟ್ವಿಟರ್ ಖಾತೆಯ ಮೂಲಕ ಸ್ಪಷ್ಟಪಡಿಸಿದ್ದು “ನಾನು ಕೋವಿಡ್ ಟೆಸ್ಟ್ ಮಾಡಿಸಿದ್ದು, ವರದಿಯಲ್ಲಿ ಪಾಸಿಟಿವ್ ಬಂದಿದೆ. ನನಗೆ ಯಾವುದೇ ಕೊರೊನಾ ರೋಗಲಕ್ಷಣಗಳಿಲ್ಲ. ಆದರೂ 10 ದಿನಗಳ ಕಾಲ ಕಾರಂಟೈನ್ ಆಗಿರಲು ನಿರ್ಧರಿಸಿದ್ದೇನೆ. ನಿಮ್ಮ ಪ್ರೀತಿಯಿಂದ ನಾನು ಶೀಘ್ರದಲ್ಲೇ ಸಂಪೂರ್ಣವಾಗಿ ಗುಣಮುಖನಾಗುತ್ತೇನೆ ಎಂಬ ಭರವಸೆ ಇದೆ” ಕಳೆದ ಎರಡು ದಿನಗಳಿಂದ ನನ್ನೊಂದಿಗೆ ಸಂಪರ್ಕಕ್ಕೆ ಬಂದಿದ್ದ ಎಲ್ಲರೂ ಮುನ್ನಚ್ಚರಿಕೆಯಾಗಿ ಕೋವಿಡ್ ಟೆಸ್ಟ್ ಮಾಡಿಸಿಕೊಳ್ಳವಂತೆ ಮನವಿ ಮಾಡಿಕೊಂಡಿದ್ದಾರೆ.