ಖ್ಯಾತ ಗಾಯಕ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರಿಗೆ “ಭಾರತ ರತ್ನ” ನೀಡುವಂತೆ ಕೇಂದ್ರ ಸರ್ಕಾರಕ್ಕೆ ಆಂಧ್ರ ಸಿಎಂ ಪತ್ರ…

147
firstsuddi

ಅಮರಾವತಿ : ಇತ್ತೀಚೆಗೆ ನಿಧನರಾದ ಖ್ಯಾತ ಗಾಯಕ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರಿಗೆ “ಭಾರತ ರತ್ನ” ಪ್ರಶಸ್ತಿ ಪ್ರಧಾನ ಮಾಡುವಂತೆ ಆಂದ್ರಪ್ರದೇಶ ಸರ್ಕಾರ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿದೆ. ಭಾರತ ರತ್ನ ನೀಡುವ ಕುರಿತು ಆಂದ್ರಪ್ರದೇಶ ಮುಖ್ಯಮಂತ್ರಿ ವೈ.ಎಸ್ ಜಗನ್ ಮೋಹನ್ ರೆಡ್ಡಿ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರದ ಮೂಲಕ ಮನವಿ ಮಾಡಿದ್ದಾರೆ. ಭಾರತ ರತ್ನ ಪ್ರಶಸ್ತಿಗೆ ಎಸ್.ಪಿ ಬಾಲಸುಬ್ರಹ್ಮಣ್ಯಂ ಅವರು ಅರ್ಹರಾಗಿದ್ದು, ಅವರಿಗೆ ಮರಣೋತ್ತರ “ಭಾರತ ರತ್ನ” ಪ್ರಶಸ್ತಿ ನೀಡಬೇಕೆಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮನವಿ ಮಾಡಿದ್ದಾರೆ.