ಟ್ಯಾಂಕರ್ ಹಾಗೂ ಸ್ಕೂಟರ್ ನಡುವೆ ಮುಖಾಮುಖಿ ಡಿಕ್ಕಿ : ತಂದೆ, ಮಗಳು ಸ್ಥಳದಲ್ಲೇ ಸಾವು…

141
firstsuddi

ಕಾರವಾರ : ಟ್ಯಾಂಕರ್ ಹಾಗೂ ಸ್ಕೂಟರ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ತಂದೆ ಮಗಳು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಉತ್ತರಕನ್ನಡ ಜಿಲ್ಲೆಯ ಯಲ್ಲಾಪುರ ತಾಲ್ಲೂಕಿನ ಅರೆಬೈಲ್ ಘಟ್ಟದ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ. ವಿನೋದ್ ಕಿಂದಳಕರ್(56) ಹಾಗೂ ಮಗಳು ಸುನೇಹಾ(12) ಮೃತ ದುರ್ದೈವಿಗಳು. ಯಲ್ಲಾಪುರದ ಅಗ್ನಿಶಾಮಕ ದಳ ಠಾಣೆಯಲ್ಲಿ ಮುಖ್ಯ ಅಗ್ನಿಶಾಮಕರಾಗಿ ಕಾರ್ಯ ನಿರ್ವಹಿಸುತ್ತಿದ್ದ ವಿನೋದ್ ಕಿಂದಳಕರ್ ಅವರು ಮಗಳನ್ನು ತಮ್ಮ ಸ್ವಗ್ರಾಮವಾದ ಅಂಕೋಲಾ ತಾಲ್ಲೂಕಿನ ಹಾರವಾಡಾಕ್ಕೆ ಬಿಟ್ಟು ಬರಲು ತಮ್ಮ ಸ್ಕೂಟಿಯಲ್ಲಿ ತೆರಳುತ್ತಿದ್ದರು. ಈ ವೇಳೆ ಎದುರಿನಿಂದ ಬಂದ ಟ್ಯಾಂಕರ್ ಸ್ಕೂಟಿಗೆ ಡಿಕ್ಕಿ ಹೊಡೆದಿದ್ದು, ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಯಲ್ಲಾಪುರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.