ದೇಶದಲ್ಲಿ ಒಂದೇ ದಿನ 86,821 ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 63,12,585ಕ್ಕೆ ಏರಿಕೆ…

113
firstsuddi

ನವದೆಹಲಿ : ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ ದೇಶದಲ್ಲಿ 86,821 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದ್ದು, ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 63,12,585 ಕ್ಕೆ ಏರಿಕೆಯಾಗಿದೆ. ಅಲ್ಲದೇ ನಿನ್ನೆ ಒಂದೇ ದಿನ 1,181 ಮಂದಿ ಸೋಂಕಿಗೆ ಬಲಿಯಾಗಿದ್ದು, ಮೃತರ ಸಂಖ್ಯೆ 98,678ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 63,12,585 ಮಂದಿ ಸೋಂಕಿತರ ಪೈಕಿ 52,73,202 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ದೇಶದಲ್ಲಿ ಇನ್ನೂ 9,40,705 ಮಂದಿ ಸೋಂಕಿತರು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದು ಬಂದಿದೆ.