ಸಚಿವ ಶ್ರೀಮಂತ ಪಾಟೀಲ್ ಅವರಿಗೆ ಕೊರೊನಾ ಪಾಸಿಟಿವ್…

143
firstsuddi

ಬೆಳಗಾವಿ : ಕೈಮಗ್ಗ ಮತ್ತು ಜವಳಿ ಸಚಿವ ಶ್ರೀಮಂತ ಪಾಟೀಲ್ ಅವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದ್ದು, ಈ ಕುರಿತು ಸ್ವತಃ ಸಚಿವರೇ ಈ ಕುರಿತು ಸ್ಪಷ್ಟಪಡಿಸಿದ್ದಾರೆ. ಇಂದು ನಾನು ಕೋವಿಡ್ ಪರೀಕ್ಷೆ ಮಾಡಿಸಿದ್ದು, ವರದಿಯಲ್ಲಿ ಪಾಸಿಟಿವ್ ಎಂದು ಬಂದಿದೆ. ಯಾವುದೇ ರೋಗ ಲಕ್ಷಣಗಳು ಇಲ್ಲದಿದ್ದರೂ, ವೈದ್ಯರ ಸಲಹೆ ಮೇರೆಗೆ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದೇನೆ. ನಿಮ್ಮೆಲ್ಲರ ಹಾರೈಕೆ, ಆಶೀರ್ವಾದದಿಂದ ಆದಷ್ಟು ಬೇಗ ಗುಣಮುಖನಾಗಿ, ನಿಮ್ಮ ಸೇವೆಗೆ ಮರಳುತ್ತೇನೆ. ಕಳೆದ ಎರಡು ಮೂರು ದಿನಗಳಿಂದ ನನ್ನ ಪ್ರಾಥಮಿಕ ಸಂಪರ್ಕಕ್ಕೆ ಬಂದಿರುವವರು ಕೊರೋನಾ ಪರೀಕ್ಷೆ ಮಾಡಿಸಿಕೊಳ್ಳಲು ವಿನಂತಿಸುತ್ತೇನೆ ಎಂದು ಸಚಿವರು ಟ್ವೀಟ್ ಮಾಡಿದ್ದಾರೆ.