ಇಂದು ಮಹಾತ್ಮ ಗಾಂಧಿ, ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ-ಮೋದಿ, ರಾಮನಾಥ್ ಕೋವಿಂದ್ ಅವರಿಂದ ಪುಷ್ಪನಮನ…

137
firstsuddi

ನವದೆಹಲಿ : ಇಂದು ದೇಶಾದ್ಯಂತ ರಾಷ್ಟ್ರಪಿತ ಗಾಂಧೀಜಿ ಅವರ 151ನೇ ಜನ್ಮದಿನಾಚರಣೆಯನ್ನು ಆಚರಿಸಲಾಗುತ್ತಿದ್ದು, ಈ ಹಿನ್ನೆಲೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಹಾಗೂ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಮಹಾತ್ಮ ಗಾಂಧಿ ಅವರಿಗೆ ಪುಷ್ಪನಮನ ಸಲ್ಲಿಸಿದರು. ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ದೆಹಲಿಯ ರಾಜ್‍ಘಾಟ್‍ಗೆ ತೆರಳಿ ಮಹಾತ್ಮ ಗಾಂಧೀ ಅವರ ಸ್ಮಾರಕಕ್ಕೆ ಪುಷ್ಪನಮನ ಸಲ್ಲಿಸಿದರು. ಗಾಂಧಿ ಜಯಂತಿ ಹಿನ್ನೆಲೆ, ಟ್ವೀಟ್ ಮಾಡಿರುವ ಪ್ರಧಾನಿ ಮೋದಿ ಅವರು, ಗಾಂಧೀಜಿ ಅವರ ಜೀವನ ಮತ್ತು ಉದಾತ್ತ ಆಲೋಚನೆಗಳಿಂದ ನಾವು ಕಲಿಯಬೇಕಾದದ್ದು ಬಹಳಷ್ಟಿದೆ. ಸಮೃದ್ಧ ಮತ್ತು ಸಹಾನುಭೂತಿಯ ಭಾರತವನ್ನು ರಚಿಸಲು ಬಾಪು ಅವರ ಆದರ್ಶಗಳು ನಮಗೆ ಮಾರ್ಗದರ್ಶನ ನೀಡಲಿ ಎಂದು ಟ್ವೀಟ್ ಮಾಡಿದ್ದಾರೆ.
ಇಂದು ಮಾಜಿ ಪ್ರಧಾನಿ ಲಾಲ್ ಬಹದ್ದೂರು ಶಾಸ್ತ್ರಿ ಅವರ 116ನೇ ಜನ್ಮದಿನವಾಗಿದ್ದು, ಪ್ರಧಾನಿ ಮೋದಿ ಅವರು ವಿಜಯಘಾಟ್‍ನಲ್ಲಿ ಇರುವ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಸ್ಮಾರಕಕ್ಕೆ ಪುಷ್ಪನಮನ ಸಲ್ಲಿಸಿದರು. ಲಾಲ್ ಬಹದ್ದೂರ್ ಶಾಸ್ತ್ರಿ ಜೀ ಅವರು ಸ್ಥಿರ ಮತ್ತು ಅತ್ಯಂತ ದೃಢ ನಿಲುವಿನ ವ್ಯಕ್ತಿಯಾಗಿದ್ದರು. ಸರಳತೆಯನ್ನು ನಿರೂಪಿಸಿದ್ದರು. ಅಲ್ಲದೇ ರಾಷ್ಟ್ರದ ಕಲ್ಯಾಣಕ್ಕಾಗಿ ಬದುಕಿದ್ದರು. ಅಷ್ಟೇ ಅಲ್ಲದೇ ಅವರು ಭಾರತಕ್ಕಾಗಿ ಮಾಡಿದ ಎಲ್ಲದಕ್ಕೂ ಆಳವಾದ ಕೃತಜ್ಞತೆಗಳೊಂದಿಗೆ ಅವರ ಜಯಂತಿಯಲ್ಲಿ ನಾವು ಅವರನ್ನು ನೆನಪಿಸಿಕೊಳ್ಳುತ್ತೇವೆ” ಎಂದು ಶುಭಕೋರಿದ್ದಾರೆ.