ಕೊಡಗು : ವಿದ್ಯುತ್ ಲೈನ್ ದುರಸ್ಥಿ ವೇಳೆ ವಿದ್ಯುತ್ ಪ್ರವಹಿಸಿ ಚಿಕ್ಕಮಗಳೂರು ಮೂಲದ ಲೈನ್‍ಮ್ಯಾನ್ ಸಾವು…

175
firstsuddi

ಕೊಡಗು : ವಿದ್ಯುತ್ ಲೈನ್ ದುರಸ್ಥಿ ಮಾಡುವ ವೇಳೆ ವಿದ್ಯುತ್ ಪ್ರವಹಿಸಿ ಯುವ ಲೈನ್‍ಮ್ಯಾನ್ ಮೃತಪಟ್ಟಿರುವ ಘಟನೆ ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಶಾಂತಪುರ ಗ್ರಾಮದಲ್ಲಿ ನಡೆದಿದೆ. ಮೃತ ಯುವಕನನ್ನು ಚಿಕ್ಕಮಗಳೂರು ಜಿಲ್ಲೆಯ ಕುಪ್ಪಲ್ ಗ್ರಾಮದ ನಿವಾಸಿ ಉಲ್ಲಾಸ್(23) ಎಂದು ಗುರುತಿಸಲಾಗಿದೆ. ಕಳೆದ ನಾಲ್ಕು ವರ್ಷಗಳಿಂದ ಕೊಡ್ಲಿಪೇಟೆ ಚೆಸ್ಕಾಂ ವಿಭಾಗದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಯುವಕ ಇಂದು 11 ಕೆ.ವಿ ಸಾಮರ್ಥ್ಯದ ವಿದ್ಯುತ್ ಲೈನ್ ದುರಸ್ಥಿ ಮಾಡುತ್ತಿದ್ದ ವೇಳೆ ವಿದ್ಯುತ್ ಪ್ರವಹಿಸಿ ಮೃತಪಟ್ಟಿದ್ದು, ಈ ಕುರಿತು ಶನಿವಾರಸಂತೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.