ದೇಶದಲ್ಲಿ ಒಂದೇ ದಿನ 79,476 ಸೋಂಕಿತರು ಪತ್ತೆ-1 ಲಕ್ಷದ ಗಡಿ ದಾಟಿದ ಮೃತರ ಸಂಖ್ಯೆ…

112
firstsuddi

ನವದೆಹಲಿ : ಕಳೆದ 24 ಗಂಟೆಯಲ್ಲಿ ದೇಶದಲ್ಲಿ 79,476 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದ್ದು, ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 64,73,545ಕ್ಕೆ ಏರಿಕೆಯಾಗಿದೆ. ಅಲ್ಲದೇ ನಿನ್ನೆ ಒಂದೇ ದಿನ 1,069 ಮಂದಿ ಸೋಂಕಿಗೆ ಬಲಿಯಾಗಿದ್ದು, ಮೃತರ ಸಂಖ್ಯೆ 1,00,842 ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 64,73,545 ಮಂದಿ ಸೋಂಕಿತರ ಪೈಕಿ 54,27,707 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ದೇಶದಲ್ಲಿ ಇನ್ನೂ 9,44,996 ಮಂದಿ ಸೋಂಕಿತರು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದು ಬಂದಿದೆ.