ಬೆಂಗಳೂರು : ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಪುತ್ರ, ಬಿಜೆಪಿ ಉಪಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದ್ದು, ಮನೆಯಲ್ಲಿಯೇ ಕ್ವಾರಂಟೈನ್ ಆಗಿದ್ದಾರೆ. ಬಿ.ವೈ. ವಿಜಯೇಂದ್ರ ಅವರು ಎಂದಿನಂತೆ ನಿನ್ನೆಯೂ ಕೂಡಾ ಕೊರೊನಾ ತಪಾಸಣೆ ನಡೆಸಿದಾಗ ಸೋಂಕು ತಗುಲಿರುವುದು ದೃಢವಾಗಿದ್ದು, ಈ ಕುರಿತು ಟ್ವೀಟ್ ಮೂಲಕ ಸ್ಪಷ್ಟಪಡಿಸಿದ್ದಾರೆ. ನನ್ನ ಕೊರೋನಾ ಪರೀಕ್ಷಾ ವರದಿಯಲ್ಲಿ ಪಾಸಿಟಿವ್ ಬಂದಿದ್ದು, ಯಾವುದೇ ರೋಗ ಲಕ್ಷಣಗಳಿಲ್ಲದಿದ್ದರೂ ವೈದ್ಯರ ಸಲಹೆಯಂತೆ ಕ್ವಾರಂಟೈನ್ ನಲ್ಲಿದ್ದೇನೆ. ಕಳೆದ ಕೆಲವು ದಿನಗಳಿಂದ ನನ್ನ ಜೊತೆ ಸಂಪರ್ಕದಲ್ಲಿದ್ದವರು ಎಲ್ಲಾ ಮುನ್ನೆಚ್ಚರಿಕೆ ವಹಿಸಿಬೇಕು ಎಂದು ವಿನಂತಿಸಿಕೊಳ್ಳುತ್ತೇನೆ ಎಂದು ಮನವಿ ಮಾಡಿಕೊಂಡಿದ್ದಾರೆ.










