ದೇಶದಲ್ಲಿ ಒಂದೇ ದಿನ 74,442 ಸೋಂಕಿತರು ಪತ್ತೆ- ಸೋಂಕಿತರ ಸಂಖ್ಯೆ 66,23,816ಕ್ಕೆ ಏರಿಕೆ…

122
firstsuddi

ನವದೆಹಲಿ : ಕಳೆದ 24 ಗಂಟೆಯಲ್ಲಿ ದೇಶದಲ್ಲಿ 74,442ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದ್ದು, ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 66,23,816ಕ್ಕೆ ಏರಿಕೆಯಾಗಿದೆ. ಅಲ್ಲದೇ ನಿನ್ನೆ ಒಂದೇ ದಿನ 903 ಮಂದಿ ಸೋಂಕಿಗೆ ಬಲಿಯಾಗಿದ್ದು, ಮೃತರ ಸಂಖ್ಯೆ 1,02,685 ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 66,23,816ಮಂದಿ ಸೋಂಕಿತರ ಪೈಕಿ 55,86,704 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ದೇಶದಲ್ಲಿ ಇನ್ನೂ 9,34,427 ಮಂದಿ ಸೋಂಕಿತರು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದು ಬಂದಿದೆ.