ಕಳಸ : ಶಾಸಕ ಎಂ.ಪಿ.ಕುಮಾರಸ್ವಾಮಿಗೆ ಸಚಿವ ಸ್ಥಾನ ನೀಡುವಂತೆ ಜಿಲ್ಲಾ ಬುಡಕಟ್ಟು ಆದಿವಾಸಿ ಸಂಘ ಒತ್ತಾಯ…

233
firstsuddi

ಕಳಸ : ಶಾಸಕ ಎಂ.ಪಿ.ಕುಮಾರಸ್ವಾಮಿಗೆ ಸಚಿವ ಸ್ಥಾನ ನೀಡಬೇಕು ಎಂದು ಜಿಲ್ಲಾ ಬುಡಕಟ್ಟು ಆದಿವಾಸಿ ಸಂಘ ಕಳಸ ಇವರು ಒತ್ತಾಯಿಸಿದ್ದಾರೆ.
ಕಳಸದ ಕುಂಬಳಡಿಕೆ ಪ್ರದೇಶದಲ್ಲಿ ನಡೆದ ಜಿಲ್ಲಾ ಬುಡಕಟ್ಟು ಆದಿವಾಸಿ ಸಂಘದ ಜಿಲ್ಲಾ ಮಟ್ಟದ ತುರ್ತು ಸಭೆಯಲ್ಲಿ ಒತ್ತಾಯ ಮಾಡಲಾಗಿದೆ.
ಈ ಸಂದರ್ಭದಲ್ಲಿ ಮಾತನಾಡಿದ ಸಂಘದ ಜಿಲ್ಲಾಧ್ಯಕ್ಷರಾದ ಕೃಷ್ಣಪ್ಪ, ಪಕ್ಷ ಯಾವುದೇ ಇರಲಿ ಆದರೆ ನಮಗೆ ವ್ಯಕ್ತಿ ಮುಖ್ಯ ಮೀಸಲು ಕ್ಷೇತ್ರವಾದ ಮೂಡಿಗೆರೆ ತಾಲ್ಲೂಕಿನ ಶಾಸಕರಾದ ಎಂ.ಪಿ.ಕುಮಾರಸ್ವಾಮಿಯವರು ಸಚಿವರಾದರೆ ಇಲ್ಲಿಯ ಕೆಲ ವರ್ಗದ ಸಮುದಾಯಕ್ಕೆ ಪ್ರಯೋಜನವಾಗಲಿದೆ. ಸಮುದಾಯಗಳು ಅಭಿವೃದ್ಧಿಯಾಗಲಿದೆ. ಆದ್ದರಿಂದ ಮುಖ್ಯಮಂತ್ರಿ ಯಡಿಯೂರಪ್ಪನವರು ಎಂ.ಪಿ.ಕುಮಾರಸ್ವಾಮಿಯವರಿಗೆ ಸಚಿವ ಸ್ಥಾನವನ್ನು ನೀಡಬೇಕು ಎಂದು ಹೇಳಿದರು.
ಮೂಡಿಗೆರೆ ತಾಲ್ಲೂಕು ಸಂಘದ ಅಧ್ಯಕ್ಷ ಸಂಜೀವ ಮಾತನಾಡಿ ಎಂ.ಪಿ.ಕುಮಾರಸ್ವಾಮಿ ನಮ್ಮ ಸಮುದಾಯಕ್ಕೆ ನೀಡಿದ ಕೊಡುಗೆ ಅಪಾರವಾಗಿದೆ. ನಮಗಾಗಿ ಹೆಚ್ಚಿನ ಶ್ರಮ ನೀಡಿದ್ದಾರೆ. ಕೆಲ ವರ್ಗದರಿವರಿಗೆ ಹೆಚ್ಚಿನ ಪ್ರಾಸಶ್ತ್ಯ ನೀಡುವ ಅವರು ಹಲವಾರು ಬಾರಿ ಶಾಸಕರಾದರೂ ಕೂಡ ಅವರಿಗೆ ಸಚಿವ ಸ್ಥಾನ ಸಿಕ್ಕಿಲ್ಲ. ಈ ಬಾರಿ ಅವರಿಗೆ ಮುಖ್ಯ ಮಂತ್ರಿಗಳು ಸಚಿವ ಸ್ಥಾನ ನೀಡಬೇಕು. ಇದರಿಂದ ಮೂಡಿಗೆರೆ ಕ್ಷೇತ್ರದಲ್ಲಿ ಹಿಂದುಳಿದ ಪಂಗಡಗಳು ಸಾಕಷ್ಟು ಅಭಿವೃದ್ಧಿ ಕಾಣಲು ಸಹಕಾರಿಯಾಗುತ್ತದೆ ಆದ್ದರಿಂದ ಅವರಿಗೆ ಸಚಿವ ಸ್ಥಾನ ನೀಡಿ ಆದಿವಾಸಿಗಳ ಅಭಿವೃದ್ಧಿಗೆ ಸಹಕರಿಸಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಜಿಲ್ಲಾ ಬುಡಕಟ್ಟು ಆದಿವಾಸಿ ಸಂಘದ ಜಿಲ್ಲಾ ಉಪಾಧ್ಯಕ್ಷ ಶೇಖರ, ಪ್ರಧಾನ ಕಾರ್ಯದರ್ಶಿ ಸುರೇಶ್ ಎಂ, ಕೊಪ್ಪ ತಾಲ್ಲೂಕು ಅಧ್ಯಕ್ಷ ಸುರೇಶ್, ಶೃಂಗೇರಿ ತಾಲ್ಲೂಕು ಅಧ್ಯಕ್ಷ ಮುತ್ತಣ್ಣ, ಚಿಕ್ಕಮಗಳೂರು ತಾಲ್ಲೂಕು ಅಧ್ಯಕ್ಷ ಸುರೇಶ್ ಇದ್ದರು.