ನಿಂತಿದ್ದ ಲಾರಿಗೆ ಕಾರು ಡಿಕ್ಕಿ-ಇಬ್ಬರು ಸ್ಥಳದಲ್ಲೇ ಸಾವು…

189
firstsuddi

ಬೀದರ್ : ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದು ತಂದೆ ಮಗ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಚಿಟಗುಪ್ಪ ತಾಲ್ಲೂಕಿನ ಮನ್ನಾಖೇಳಿ ಗ್ರಾಮದ ಬಳಿ ನಡೆದಿದೆ. ಮೃತರ ಗುರುತು ಪತ್ತೆಯಾಗಿಲ್ಲ. ಮೃತರು ಕಾರಿನಲ್ಲಿ ಒಟ್ಟು 4 ಮಂದಿ ಆಂಧ್ರಪ್ರದೇಶದಿಂದ ಮಹಾರಾಷ್ಟ್ರಕ್ಕೆ ವೇಳೆ ರಸ್ತೆ ಬದಿ ನಿಲ್ಲಿಸಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರು ಚಲಾಯಿಸುತ್ತಿದ್ದ ಮಗ ಹಾಗೂ ತಂದೆ ಸ್ಥಳದಲ್ಲೇ ಮೃತಪಟ್ಟಿದ್ದು, ಉಳಿದ ಇಬ್ಬರು ಮಕ್ಕಳಿಗೆ ಗಾಯಗಳಾಗಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಕುರಿತು ಮನ್ನಾಖೇಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.