ಅಬುಧಾಬಿ : ಸನ್ರೈಸರ್ಸ್ ಹೈದರಾಬಾದ್ ತಂಡದ ಸ್ಟಾರ್ ಬೌಲರ್ ಭುವನೇಶ್ವರ್ ಕುಮಾರ್ ಅವರು ಐಪಿಎಲ್ ಟೂರ್ನಿಯಿಂದ ಹೊರಬಿದ್ದಿದ್ದಾರೆ. ಅ.2ರಂದು ನಡೆದ ಚೆನ್ನೈ ಹಾಗೂ ಹೈದರಾಬಾದ್ ತಂಡದ ನಡುವಿನ ಪಂದ್ಯದ 19ನೇ ಓವರಿನಲ್ಲಿ ಭುವನೇಶ್ವರ್ ಕುಮಾರ್ ಅವರು ಒಂದು ಬಾಲ್ ಎಸೆದು ಬಳಿಕ ಗಾಯದ ಸಮಸ್ಯೆಯಿಂದ ಪಂದ್ಯದಿಂದ ಹೊರಗುಳಿದಿದ್ದರು. ಸ್ನಾಯು ಸಮಸ್ಯೆಯಿಂದ ಬಳಲುತ್ತಿರುವ ಭವನೇಶ್ವರ್ ಕುಮಾರ್ ಅವರಿಗೆ 6-8 ವಾರಗಳ ಕಾಲ ವಿಶ್ರಾಂತಿ ಬೇಕಾಗಿರುವುದರಿಂದ ಐಪಿಎಲ್ ಟೂರ್ನಿಯಿಂದಲೇ ಹೊರಬಿದ್ದಿದ್ದು, ಹೈದರಾಬಾದ್ ತಂಡಕ್ಕೆ ಅವರ ಅನುಪಸ್ಥಿತಿ ಕಾಡಲಿದೆ. ಭುವನೇಶ್ವರ್ ಕುಮಾರ್ ಅವರ ಸ್ಥಾನಕ್ಕೆ ಪೃಥ್ವಿರಾಜ್ ಯರ್ರಾ ಅವರು ಸೇರ್ಪಡೆಯಾಗಲಿದ್ದಾರೆ ಎಂದು ತಿಳಿದು ಬಂದಿದೆ.











