ಶ್ರೀನಗರ : ಉಗ್ರರು ಹಾಗೂ ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಭದ್ರತಾ ಪಡೆಗಳು ಮೂವರು ಉಗ್ರರನ್ನು ಹೊಡೆದುರುಳಿಸಿದ್ದಾರೆ. ದಕ್ಷಿಣ ಕಾಶ್ಮೀರಾದ ಜಿಲ್ಲೆಯ ಶೋಪಿಯಾನ್ನ ಸಜ್ಜಾದ್ ಮೊಹಲ್ಲಾ ಸುಗನ್ ಜೈನ್ಪೋರಾದಲ್ಲಿ ಭದ್ರತಾ ಪಡೆಗಳು ಉಗ್ರರಿಗಾಗಿ ನಿನ್ನೆ ಸಂಜೆಯಿಂದ ಕಾರ್ಯಾಚರಣೆ ಆರಂಭಿಸಿದ್ದರು. ಕಾರ್ಯಾಚರಣೆ ವೇಳೆ ಉಗ್ರರು ಏಕಾಏಕಿ ಭದ್ರತಾ ಪಡೆಗಳ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಇದಕ್ಕೆ ಪ್ರತಿಯಾಗಿ ದಾಳಿ ನಡೆಸಿದ ಯೋಧರು ಇಂದು ಬೆಳಗ್ಗಿನ ಜಾವ ಮೂವರು ಉಗ್ರರನ್ನು ಹೊಡೆದುರುಳಿಸುವಲ್ಲಿ ಯಶಸ್ವಿಯಾಗಿದ್ದು, ಘಟನಾ ಸ್ಥಳದಲ್ಲಿ ಕಾರ್ಯಾಚರಣೆ ಮುಂದುವರೆದಿದೆ.










