ಒಂದು ವರ್ಷ ಮಕ್ಕಳಿಗೆ promotion ಕೊಟ್ಟರೆ ನಷ್ಟವೇನಿಲ್ಲ-ಶಾಲೆ ತೆರೆಯುವ ಬಗ್ಗೆ ಟಿ.ಎನ್ ಸೀತಾರಾಮ್ ಅಭಿಪ್ರಾಯ…

117
firstsuddi

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಅಟ್ಟಹಾಸದ ನಡುವೆ ಶಾಲಾ ಕಾಲೇಜು ತೆರೆಯಬೇಕಾ, ಬೇಡವಾ ಎಂಬ ಚರ್ಚೆ ನಡೆಯುತ್ತಿದ್ದು, ಈ ಕುರಿತು ಖ್ಯಾತ ನಿರ್ದೇಶಕ ಟಿ.ಎನ್ ಸೀತಾರಾಮ್ ಅವರು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.
ಈ ಕುರಿತು ತಮ್ಮ ಫೇಸ್‍ಬುಕ್ ಖಾತೆಯಲ್ಲಿ ಬರೆದುಕೊಂಡಿರುವ ಅವರು, ಇಂಥಾ ಕೊರೋನಾ ಅಬ್ಬರದಲ್ಲಿ ಪುಟ್ಟ ಮಕ್ಕಳ ಶಾಲೆಗಳನ್ನು ಬೇರೆ ತೆರೆಯುತ್ತಾರಂತೆ. ಯಾವ ವಾದ ಏನೇ ಇರಲಿ ಒಂದೇ ಒಂದು ಪುಟ್ಟ ಮಗುವಿಗೆ ಏನಾದರೂ ಕೊರೋನಾ ಸಂಬಂಧಿತ ಅಪಾಯವಾದರೆ ಇಡಿಯ ರಾಜ್ಯದ ತಂದೆ ತಾಯಿಗಳು ಆತಂಕ, ಹಿಂಸೆ ಪಡಲು ಶುರು ಮಾಡುತ್ತಾರೆ. ಹೆಚ್ಚು ಆದರಂತೂ ರಾಜ್ಯದ ಅಂತಃಕಳೆ ಮಂಕಾಗಿ ಎಲ್ಲರೂ ಪಾಪ ಪ್ರಜ್ಞೆ ಅನುಭವಿಸ ಬೇಕಾಗುತ್ತದೆ.
ಬೇಕಾ ಇದೆಲ್ಲಾ… ಒಂದು ವರ್ಷ ಮಕ್ಕಳಿಗೆ ಸುಮ್ಮನೆ promotion ಕೊಟ್ಟರೆ ನಷ್ಟ ವೇನಿಲ್ಲ. ಮುಂದೆ ಅದನ್ನು ಸರಿ ಮಾಡಿಕೊಳ್ಳಬಲ್ಲ ಬುದ್ಧ, ಚಾಣಾಕ್ಷತೆ ಮಕ್ಕಳಿಗಿರುತ್ತದೆ.. ಸಧ್ಯಕ್ಕೆ ಶಾಲೆ ಶುರುಮಾಡುವುದು ಬೇಡ

ಇಂಥಾ ಕೊರೋನಾ ಅಬ್ಬರದಲ್ಲಿ ಪುಟ್ಟ ಮಕ್ಕಳ ಶಾಲೆಗಳನ್ನು ಬೇರೆ ತೆರೆಯುತ್ತಾರಂತೆ.ಯಾವ ವಾದ ಏನೇ ಇರಲಿ ಒಂದೇ ಒಂದು ಪುಟ್ಟ ಮಗುವಿಗೆ ಏನಾದರೂ…

Posted by Seetharam Talagavar on Wednesday, 7 October 2020