ಜಮ್ಮು ಕಾಶ್ಮೀರಾದಲ್ಲಿ ಎನ್‍ಕೌಂಟರ್-ಇಬ್ಬರು ಉಗ್ರರನ್ನು ಹೊಡೆದುರುಳಿಸಿದ ಸೇನೆ…

136
firstsuddi

ಶ್ರೀನಗರ : ಉಗ್ರರು ಹಾಗೂ ಯೋಧರ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಭಾರತೀಯ ಯೋಧರು ಇಬ್ಬರು ಉಗ್ರರನ್ನು ಹೊಡೆದುರುಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಜಮ್ಮು ಕಾಶ್ಮೀರಾದ ಕುಲ್ಗಮ್ ಜಿಲ್ಲೆಯ ಚಿಂಗಮ್ ಬಳಿ ಉಗ್ರರು ಅಡಗಿ ಕುಳಿತಿದ್ದಾರೆ ಎಂಬ ಖಚಿತ ಮಾಹಿತಿಯನ್ನು ತಿಳಿದು ಉಗ್ರರ ಅಡಗುದಾಣವನ್ನು ಸುತ್ತುವರೆದು ಯೋಧರು ಹಾಗೂ ಜಮ್ಮು ಕಾಶ್ಮಿರಾದ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿದ್ದಾರೆ. ಕಾರ್ಯಚರಣೆ ನಡೆಯುತ್ತಿದ್ದ ವೇಳೆ ಉಗ್ರರು ಏಕಾಏಕಿ ಯೋಧರತ್ತ ಗುಂಡಿನ ದಾಳಿ ನಡೆಸಿದ್ದು, ಇದಕ್ಕೆ ಪ್ರತಿಯಾ ದಾಳಿ ನಡೆಸಿದ ಯೋಧರು ಹಾಗೂ ಪೊಲೀಸರು ಅಡಗಿದ್ದ ಇಬ್ಬರು ಉಗ್ರರನ್ನು ಹೊಡೆದುರುಳಿಸಿದ್ದು, ಘಟನಾ ಸ್ಥಳದಲ್ಲಿ ಕಾರ್ಯಾಚರಣೆ ಮುಂದುವರೆದಿದೆ ಎಂದು ಸೇನಾ ಮೂಲಗಳಿಂದ ತಿಳಿದು ಬಂದಿದೆ.