ಬೆಂಗಳೂರು : ಚಾಕುವಿನಿಂದ ಇರಿದು ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಗ್ರಾಮದ ಜನತಾ ಕಾಲೋನಿಯಲ್ಲಿ ನಡೆದಿದೆ. ಹರಿಯಾಣ ಮೂಲದ ಸಂಜಯ್ ಕುಮಾರ್(38) ಕೊಲೆಯಾದ ವ್ಯಕ್ತಿ ಎಂದು ಗುರುತಿಸಲಾಗಿದೆ. ದೊಡ್ಡಬಳ್ಳಾಪುರ ಕೈಗಾರಿಕಾ ಪ್ರದೇಶದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಸಂಜಯ್ ಕುಮಾರ್ ಅವರಿಗೆ ತಮ್ಮ ಮನೆಯ ಬಳಿ ಅಪರಿಚಿತ ವ್ಯಕ್ತಿ ಚಾಕುವಿನಿಂದ ಇರಿದು ಪರಾರಿಯಾಗಿದ್ದು, ರಕ್ತದ ಮಡುವಿನಲ್ಲಿ ಬಿದ್ದಿದ್ದ ಸಂಜಯ್ ಕುಮಾರ್ ಒದ್ದಾಡಿ ಒದ್ದಾಡಿ ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ. ಈ ಕುರಿತು ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.










