ಇಂದಿನಿಂದ ಅ.30 ರ ವರೆಗೆ ಶಿಕ್ಷಕರಿಗೆ ಮಧ್ಯಂತರ ರಜೆ ಘೋಷಿಸಿ ರಾಜ್ಯ ಸರ್ಕಾರ ಆದೇಶ…

134
firstsuddi

ಬೆಂಗಳೂರು: ವಿದ್ಯಾರ್ಥಿಗಳು ಮತ್ತು ಶಿಕ್ಷಕರ ಆರೋಗ್ಯದ ಹಿತದೃಷ್ಟಿಯಿಂದ ಶಾಲೆಗಳಿಗೆ ಇಂದಿನಿಂದ ಮೂರು ವಾರಗಳ ಕಾಲ ರಜೆ ಘೋಷಿಸಲು ಮುಖ್ಯಮಂತ್ರಿ ಆದೇಶಿಸಿದ್ದಾರೆ.

ಕೋವಿಡ್ 19 ಸೋಂಕಿನ ಹಿನ್ನೆಲೆಯಲ್ಲಿ ಸದ್ಯಕ್ಕೆ ಶಾಲೆಗಳನ್ನು ಪ್ರಾರಂಭಿಸದಿರಲು ಮತ್ತು ವಿದ್ಯಾಗಮ ಕಾರ್ಯಕ್ರಮವನ್ನು ಸಹ ಸ್ಥಗಿತಗೊಳಿಸಲು ಈಗಾಗಲೇ ಆದೇಶಿಸಲಾಗಿದೆ. ಹಲವಾರು ಶಿಕ್ಷಕರು ಸಹ ಕೋವಿಡ್-19 ಸೋಂಕಿಗೆ ಒಳಗಾಗಿರುವುದನ್ನು ಮಾಧ್ಯಮದ ಮೂಲಕ ಗಮನಿಸಿದ್ದೇನೆ. ಆದ್ದರಿಂದ ವಿದ್ಯಾರ್ಥಿಗಳು ಮತ್ತು ಶಿಕ್ಷಕರ ಆರೋಗ್ಯದ ಹಿತದೃಷ್ಟಿಯಿಂದ ಶಾಲೆಗಳಿಗೆ ಇಂದಿನಿಂದ ಮೂರು ವಾರಗಳ ಕಾಲ ಅಂದರೆ ಅ.30ರವೆಗೆ ಮಧ್ಯಂತರ ರಜೆ ಘೋಷಿಸಿ ಆದೇಶ ಹೊರಡಿಸಲು ಹಿರಿಯ ಅಧಿಕಾರಿಗಳಿಗೆ ಈಗಾಗಲೇ ನಿರ್ದೇಶನ ನೀಡಿದ್ದೇನೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಆದೇಶದಲ್ಲಿ ತಿಳಿಸಿದ್ದಾರೆ.