ಖ್ಯಾತ ಸಂಗೀತ ನಿರ್ದೇಶಕ ರಾಜನ್ ಅವರು ಹೃದಯಾಘಾತದಿಂದ ನಿಧನ…

126
firstsuddi

ಬೆಂಗಳೂರು : ಖ್ಯಾತ ಸಂಗೀತ ನಿರ್ದೇಶಕ ರಾಜನ್(87) ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದ ರಾಜನ್ ಅವರು ಬೆಂಗಳೂರಿನ ಆರ್.ಟಿ. ನಗರದ ತಮ್ಮ ನಿವಾಸದಲ್ಲಿ ನಿನ್ನೆ ರಾತ್ರಿ 11 ಗಂಟೆಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ರಾಜನ್ ಅವರು ಕನ್ನಡ, ತಮಿಳು, ಮಲಯಾಳಂ, ತೆಲುಗು, ಹಿಂದಿ ಸೇರಿದಂತೆ ಹಲವಾರು ಭಾಷೆಗಳಲ್ಲಿ 375ಕ್ಕೂ ಹೆಚ್ಚು ಚಿತ್ರಕ್ಕೆ ಸಂಗೀತ ನಿರ್ದೇಶನ ಮಾಡಿದ್ದರು. ಕನ್ನಡದಲ್ಲೇ 200ಕ್ಕೂ ಹೆಚ್ಚು ಸಿನಿಮಾಗಳಿಗೆ ಸಂಗೀತ ನೀಡಿದ್ದಾರೆ. ರಾಜನ್-ನಾಗೇಂದ್ರ ಎಂದೇ ಖ್ಯಾತವಾಗಿದ್ದ ಸಹೋದರರ ಪೈಕಿ ಸಂಗೀತ ನಿರ್ದೇಶಕ ರಾಜನ್ ಹಿರಿಯರಾಗಿದ್ದರು. 1950-1990ರವರೆಗೆ ಗಂಧದ ಗುಡಿ, ಎರಡು ಕನಸು, ಪರಸಂಗದ ಗೆಂಡೆತಿಮ್ಮ, ಬಯಲು ದಾರಿ, ನಾ ನಿನ್ನ ಮರೆಯಲಾರೆ, ಹೊಂಬಿಸಿಲು, ಸೇರಿದಂತೆ ಹಲವು ಚಿತ್ರಗಳಿಗೆ ಸಂಗೀತ ನಿರ್ದೇಶಿಸಿದ್ದರು. ರಾಜನ್ ಅವರ ಅಂತ್ಯಸಂಸ್ಕಾರ ಇಂದು ಹೆಬ್ಬಾಳದ ಸ್ಮಶಾನದಲ್ಲಿ ನೆರವೇರಿಸಲಾಗುತ್ತದೆ ಎಂದು ರಾಜನ್ ಅವರ ಪುತ್ರ ಅನಂತ್ ಅವರು ಮಾಹಿತಿ ನೀಡಿದ್ದಾರೆ.