ಕಾಂಗ್ರೆಸ್ ಪಕ್ಷಕ್ಕೆ ಗುಡ್ ಬೈ ಹೇಳಿದ ನಟಿ ಖುಷ್ಬೂ…

159
firstsuddi

ಚೆನ್ನೈ : ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ವಕ್ತಾರೆಯಾಗಿದ್ದ ನಟಿ ಖುಷ್ಬೂ ಅವರು ಇಂದು ಪಕ್ಷಕ್ಕೆ ರಾಜೀನಾಮೆ ನೀಡಿದ್ದು, ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ ಎಂದು ತಿಳಿದು ಬಂದಿದೆ. ನಟಿ ಖಷ್ಬೂ ಅವರು ಕಾಂಗ್ರೆಸ್ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಪತ್ರ ಬರೆಯುವ ಮೂಲಕ ಪಕ್ಷಕ್ಕೆ ರಾಜೀನಾಮೆ ನೀಡುವ ಮಾಹಿತಿ ತಿಳಿಸಿದ್ದಾರೆ. ಜನರ ಸಂಪರ್ಕವೇ ಇಲ್ಲದ ಪಕ್ಷದ ಉನ್ನತ ಮಟ್ಟದಲ್ಲಿ ಕುಳಿತಿರುವ ಕೆಲವು ನಾಯಕರಿಂದಲೇ ಆದೇಶಗಳು ಬರುತ್ತವೆ. ಪಕ್ಷಕ್ಕಾಗಿ ಪ್ರಾಮಾಣಿಕವಾಗಿ ದುಡಿಯುತ್ತಿರುವ ನಮ್ಮಂತವರನ್ನು ತಡೆಯಲಾಗುತ್ತಿದೆ. ಇದರಿಂದ ಪಕ್ಷಕ್ಕೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ. ಖುಷ್ಬೂ ಅವರು ರಾಜೀನಾಮೆ ನೀಡುತ್ತಿದ್ದಂತೆ ಕಾಂಗ್ರೆಸ್ ರಾಷ್ಟ್ರೀಯ ವಕ್ತಾರೆ ಪದವಿಯಿಂದ ಅವರನ್ನು ವಜಾಗೊಳಿಸಿ ಆದೇಶ ಮಾಡಲಾಗಿದ್ದು, ಇಂದು ಸಂಜೆ ಚೆನ್ನೈನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಅಧಿಕೃತವಾಗಿ ಖುಷ್ಬೂ ಅವರು ಬಿಜೆಪಿ ಸೇರಲಿದ್ದಾರೆ ಎನ್ನಲಾಗಿದೆ.