ನವದೆಹಲಿ : ಬೆಳಿಗ್ಗೆ ತಾನೇ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದ ನಟಿ ಖುಷ್ಬೂ ಅವರು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಕಾಂಗ್ರೆಸ್ ಪಕ್ಷದ ಮೇಲೆ ಅಸಮಾಧಾನಗೊಂಡು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಪತ್ರ ಬರೆಯುವ ಮೂಲಕ ರಾಜೀನಾಮೆ ನೀಡುವುದಾಗಿ ತಿಳಿಸಿದ್ದ ಖುಷ್ಬೂ ಅವರು ಇಂದು ಬಿಜೆಪಿ ಕೇಂದ್ರ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಅವರ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಯಾದರು.










