ನವದೆಹಲಿ : ಕಳೆದ 24 ಗಂಟೆಯಲ್ಲಿ ದೇಶದಲ್ಲಿ 63,509 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದ್ದು, ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 72,39,390ಕ್ಕೆ ಏರಿಕೆಯಾಗಿದೆ. ಅಲ್ಲದೇ ನಿನ್ನೆ ಒಂದೇ ದಿನ 730 ಮಂದಿ ಸೋಂಕಿಗೆ ಬಲಿಯಾಗಿದ್ದು, ಮೃತರ ಸಂಖ್ಯೆ 1,10,586ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 72,39,390 ಮಂದಿ ಸೋಂಕಿತರ ಪೈಕಿ 63,01,928 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ದೇಶದಲ್ಲಿ ಇನ್ನೂ 8,26,876 ಮಂದಿ ಸೋಂಕಿತರು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದು ಬಂದಿದೆ.










