ಶ್ರೀನಗರ : 14 ತಿಂಗಳಿನಿಂದ ಗೃಹ ಬಂಧನದಲ್ಲಿದ್ದ ಜಮ್ಮು ಕಾಶ್ಮೀರಾದ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಅವರನ್ನು ಬಿಡುಗಡೆ ಮಾಡಲಾಗಿದೆ. ಆಗಸ್ಟ್ 5ರಂದು ಕೇಂದ್ರ ಸರ್ಕಾರ ಜಮ್ಮು ಕಾಶ್ಮೀರಾಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿದ ಬಳಿಕ ಮೆಹಬೂಬಾ ಮುಫ್ತಿ ಅವರನ್ನು ಸಾರ್ವಜನಿಕ ಸುರಕ್ಷತಾ ಕಾಯ್ದೆಯಡಿ ಗೃಹಬಂಧನದಲ್ಲಿ ಇರಿಸಲಾಗಿತ್ತು. ಬರೋಬ್ಬರಿ 14 ತಿಂಗಳಿನಿಂದ ಗೃಹ ಬಂಧನದಲ್ಲಿದ್ದ ಮೆಹಬೂಬಾ ಮುಫ್ತಿ ಅವರನ್ನು ಇಂದು ಬಿಡುಗಡೆಗೊಳಿಸಲಾಗಿದೆ.
ಇತ್ತೀಚೆಗಷ್ಟೇ ಮೆಹಬೂಬಾ ಮುಫ್ತಿ ಅವರ ಮಗಳು ಇಲ್ತಿಯಾ ಮುಫ್ತಿ ಅವರು ಮೆಹಬೂಬಾ ಮುಫ್ತಿ ಗೃಹಬಂಧನದಿಂದ ಬಿಡುಗಡೆಯಾಗುವುದರ ಬಗ್ಗೆ ಖಚಿತಪಡಿಸಿದ್ದರು.










