ಚಿಕ್ಕಮಗಳೂರು : ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಜಿಲ್ಲಾಧ್ಯಕ್ಷ ಹೆಚ್.ಚಂದ್ರಪ್ಪ ಅವರ ನಿಧನಕ್ಕೆ ಜಿಲ್ಲಾ ಕಸಾಪ ಸಂತಾಪ…

153
firstsuddi

ಚಿಕ್ಕಮಗಳೂರು : ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಜಿಲ್ಲಾಧ್ಯಕ್ಷ ಹೆಚ್.ಚಂದ್ರಪ್ಪ ಅವರ ನಿಧನಕ್ಕೆ ಜಿಲ್ಲಾ ಕಸಾಪ ತೀವ್ರ ಸಂತಾಪ ಸೂಚಿಸಿದೆ.
ಶಿಕ್ಷಕರಾಗಿ, ಲೇಖಕರಾಗಿ, ಕಲಾವಿದರಾಗಿ, ರಂಗಕರ್ಮಿಯಾಗಿ ಹಲವು ಶಿಷ್ಯರಿಗೆ ಮಾರ್ಗದರ್ಶನ ಮಾಡಿ ಅವರ ಬೆಳವಣಿಗೆಗೆ ಕಾರಣರಾಗಿದ್ದ ಹೆಚ್.ಚಂದ್ರಪ್ಪ ಅವರು ಕನ್ನಡ ಸಾಹಿತ್ಯ ಸಮ್ಮೇಳನ. ಕಥಾ ಕಮ್ಮಟ ಹಾಗೂ ಉದಯೋನ್ಮುಖ ಲೇಖಕರ ಕಥಾ ಸಂಕಲನವನ್ನೂ ಹೊರ ತಂದಿದ್ದರು. ನಾಡುನುಡಿ ಹಾಗೂ ಕಲಾ ಕ್ಷೇತ್ರಕ್ಕೆ ಅವರು ಮಾಡಿರುವ ಸೇವೆ ಅವಿಸ್ಮರಣೀಯ ಎಂದು ಜಿಲ್ಲಾ ಕಸಾಪ ಅಧ್ಯಕ್ಷ ಕುಂದೂರು ಅಶೋಕ್ ಹಾಗೂ ಮೂಡಿಗೆರೆ ತಾಲ್ಲೂಕು ಕಸಾಪ ಅಧ್ಯಕ್ಷ ಮಗ್ಗಲಮಕ್ಕಿ ಗಣೇಶ್ ಶೋಕಿಸಿದ್ದಾರೆ.