ನವದೆಹಲಿ : ಇಂದು ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಭಾರಿ ಇಳಿಕೆ ಕಂಡಿದ್ದು, ಕಳೆದ 24 ಗಂಟೆಯಲ್ಲಿ ದೇಶದಲ್ಲಿ 46,791 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದ್ದು, ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 75,97,064ಕ್ಕೆ ಏರಿಕೆಯಾಗಿದೆ. ಅಲ್ಲದೇ ನಿನ್ನೆ ಒಂದೇ ದಿನ 587 ಮಂದಿ ಸೋಂಕಿಗೆ ಬಲಿಯಾಗಿದ್ದು, ಮೃತರ ಸಂಖ್ಯೆ 1,15,197ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 75,97,064 ಮಂದಿ ಸೋಂಕಿತರ ಪೈಕಿ 67,33,329 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ದೇಶದಲ್ಲಿ ಇನ್ನೂ 7,48,538 ಮಂದಿ ಸೋಂಕಿತರು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದು ಬಂದಿದೆ.










