ಮೂಡಿಗೆರೆ : ಚಾಲಕನ ನಿಯಂತ್ರಣ ತಪ್ಪಿ ಕಾಫಿತೋಟಕ್ಕೆ ಪಲ್ಟಿಯಾದ ಕಾರು…

237
firstsuddi

ಕೊಟ್ಟಿಗೆಹಾರ : ಚಾಲಕನ ನಿಯಂತ್ರಣ ತಪ್ಪಿ ಕಾರು ಕಾಫಿತೋಟಕ್ಕೆ ಪಲ್ಟಿಯಾಗಿರುವ ಘಟನೆ ನೀರುಗಂಡಿ ಸಮೀಪ ನಡೆದಿದೆ. ಕಾರಿನಲ್ಲಿ ಒಟ್ಟು 5 ಮಂದಿ ಬೆಂಗಳೂರಿನಿಂದ ಹೊರನಾಡು ಕಡೆಗೆ ತೆರಳುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಕಾರು ಕಾಫಿತೋಟಕ್ಕೆ ಉರುಳಿ ಬಿದ್ದಿದ್ದು, ಪರಿಣಾಮ ಕಾರಿನಲ್ಲಿದ್ದ ಐವರು ಪ್ರಯಾಣಿಕರು ಸಣ್ಣಪುಟ್ಟ ಗಾಯಗಳಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸಣ್ಣಪುಟ್ಟ ಗಾಯಗೊಂಡಿದ್ದ ಪ್ರಯಾಣಿಕರಿಗೆ ಮೂಡಿಗೆರೆಯ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಲಾಗಿದ್ದು ಪಲ್ಟಿಯಾಗಿದ್ದ ಕಾರನ್ನು ಸ್ಥಳೀಯರ ಸಹಾಯದಿಂದ ಹೊರ ತೆಗೆಯಲಾಯಿತು. ಹೆದ್ದಾರಿ ಅಗಲೀಕರಣದ ಕಾಮಗಾರಿ ನಡೆಯುತ್ತಿದ್ದು ರಸ್ತೆ ಇಬ್ಬದಿಯಲ್ಲಿ ಮರಗಳನ್ನು ಕಡಿದು ಹಾಕಿರುವುದರಿಂದ ಎದುರಿನಿಂದ ಬರುತ್ತಿದ್ದ ವಾಹನವೊಂದಕ್ಕೆ ಸೈಡ್ ಕೊಡಲು ಹೋಗಿ ಕಾರು ಪಲ್ಟಿಯಾಗಿದೆ ಎನ್ನಲಾಗಿದೆ. ಸ್ಥಳಕ್ಕೆ ಬಣಕಲ್ ಪೋಲಿಸರು ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.