ದೇಶದ ಎಲ್ಲಾ ಜನತೆಗೂ ಉಚಿತ ಕೊರೊನಾ ಲಸಿಕೆ ನೀಡಲಾಗುತ್ತದೆ : ಕೇಂದ್ರ ಸಚಿವ ಪ್ರತಾಪ್ ಚಂದ್ರ ಸಾರಂಗಿ.

128
firstsuddi

ನವದೆಹಲಿ : ದೇಶದ ಎಲ್ಲಾ ಜನತೆಗೂ ಉಚಿತ ಕೊರೊನಾ ಲಸಿಕೆ ನೀಡಲಾಗುತ್ತದೆ ಎಂದು ಕೇಂದ್ರ ಸಚಿವ ಪ್ರತಾಪ್ ಚಂದ್ರ ಸಾರಂಗಿ ಅವರು ಹೇಳಿದ್ದಾರೆ. ಕಳೆದ ವಾರ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬಿಹಾರ ರಾಜ್ಯಕ್ಕೆ ಉಚಿತ ಕೊರೊನಾ ಲಸಿಕೆ ನೀಡಲಾಗುತ್ತದೆ ಎಂದು ತಿಳಿಸಿದ್ದರು. ಈ ಹೇಳಿಕೆ ವಿರೋಧ ಪಕ್ಷಗಳ ಕೆಂಗಣ್ಣಿಗೆ ಗುರಿಯಾಗಿತ್ತು. ವಿರೋಧ ಪಕ್ಷಗಳ ಟೀಕಾ ಪ್ರಹಾರಕ್ಕೆ ಸಚಿವ ಪ್ರತಾಪ್ ಚಂದ್ರ ಸಾರಂಗಿ ಅವರು ಸ್ಪಷ್ಟನೆ ನೀಡಿದ್ದು, ದೇಶದ ಎಲ್ಲಾ ಜನತೆಗೆ ಉಚಿತ ಕೊರೊನಾ ಲಸಿಕೆಗಳನ್ನು ನೀಡುವುದಾಗಿ ಪ್ರಧಾನಿ ಮೋದಿ ಅವರು ಘೋಷಿಸಿದ್ದು, ಪ್ರತಿ ಸೋಂಕಿತ ವ್ಯಕ್ತಿಗೆ ಲಸಿಕೆ ಹಾಕಲು 500 ರೂ. ಖರ್ಚು ಆಗುತ್ತದೆ ಎಂದು ಮೋದಿ ಅವರು ತಿಳಿಸಿದ್ದಾರೆ ಎಂದು ಸ್ಪಷ್ಟನೆ ನೀಡಿದ್ದಾರೆ.