ರಾಜ್ಯದಲ್ಲಿ ಮುಂದಿನ 5 ದಿನ ಮತ್ತೆ ಮಳೆಯಾಗುವ ಸಾಧ್ಯತೆ…

207
firstsuddi

ಬೆಂಗಳೂರು : ರಾಜ್ಯದಲ್ಲಿ ಮತ್ತೆ ಮುಂದಿನ 5 ದಿನಗಳ ಕಾಲ ಭಾರೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ಕರ್ನಾಟಕದ ಉತ್ತರ ಒಳನಾಡು, ದಕ್ಷಿಣ ಒಳನಾಡಿನಲ್ಲಿ ನಾಳೆಯಿಂದ ನವೆಂಬರ್ 2ರ ವರೆಗೆ ಮಳೆಯಾಗಲಿದೆ. ಅ.31, ನ.1 ಹಾಗೂ ನ.2 ರಂದು ರಾಜ್ಯದ ಕರಾವಳಿ ಭಾಗ, ವಿಜಯಪುರ, ರಾಯಚೂರು, ಬೆಳಗಾವಿ, ಹಾವೇರಿ ಗದಗ ಸೇರಿದಂತೆ ಹಲವೆಡೆ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಬೇಂಗಳೂರಿನಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆಯ ಜಂಟಿ ನಿರ್ದೇಶಕ ವಿಜ್ಞಾನಿ ಸಿ.ಎಸ್. ಪಾಟೀಲ್ ಅವರು ತಿಳಿಸಿದ್ದಾರೆ.