ದೇಶದಲ್ಲಿ ಒಂದೇ ದಿನ 48,268 ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 81,37,119 ಕ್ಕೆ ಏರಿಕೆ…

184
firstsuddi

ನವದೆಹಲಿ : ಕಳೆದ 24 ಗಂಟೆಯಲ್ಲಿ ದೇಶದಲ್ಲಿ 48,268 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದ್ದು, ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 81,37,119ಕ್ಕೆ ಏರಿಕೆಯಾಗಿದೆ. ಅಲ್ಲದೇ ನಿನ್ನೆ ಒಂದೇ ದಿನ 551 ಮಂದಿ ಸೋಂಕಿಗೆ ಬಲಿಯಾಗಿದ್ದು, ಮೃತರ ಸಂಖ್ಯೆ 1,21,641ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 81,37,119 ಮಂದಿ ಸೋಂಕಿತರ ಪೈಕಿ 74,32,829 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ದೇಶದಲ್ಲಿ ಇನ್ನೂ 5,82,649 ಮಂದಿ ಸೋಂಕಿತರು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದು ಬಂದಿದೆ.