ಯೋಗೇಶ್ ಗೌಡ ಹತ್ಯೆ ಪ್ರಕರಣ : ಮಾಜಿ ಸಚಿವ ವಿನಯ್ ಕುಲಕರ್ಣಿ ಸಿಬಿಐ ವಶಕ್ಕೆ…

125
firstsuddi

ಧಾರವಾಡ : ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರನ್ನು ಸಿಬಿಐ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. 2016ರ ಜೂನ್ 15ರಂದು ಧಾರವಾಡದ ಸಪ್ತಾಪುರದ ಯೋಗೇಶ್ ಗೌಡ ಮಾಲೀಕತ್ವದ ಜಿಮ್ ಬಳಿ ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡ ಅವರನ್ನು ಹತ್ಯೆ ಮಾಡಲಾಗಿತ್ತು. ಸೆಪ್ಟೆಂಬರ್ 2019ರಲ್ಲಿ ಸಿಬಿಐ ಈ ಹತ್ಯೆ ಪ್ರಕರಣದ ವಿಚಾರಣೆಯನ್ನು ಆರಂಭಿಸಿತ್ತು. ಇದೀಗ ಸಿಬಿಐ ಅಧಿಕಾರಿಗಳು ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.