ನವದೆಹಲಿ : ಕಳೆದ 24 ಗಂಟೆಯಲ್ಲಿ ದೇಶದಲ್ಲಿ 50,357 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದ್ದು, ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 84,62,081ಕ್ಕೆ ಏರಿಕೆಯಾಗಿದೆ. ಅಲ್ಲದೇ ನಿನ್ನೆ ಒಂದೇ ದಿನ 577 ಮಂದಿ ಸೋಂಕಿಗೆ ಬಲಿಯಾಗಿದ್ದು, ಮೃತರ ಸಂಖ್ಯೆ 1,25,562ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 84,62,081 ಮಂದಿ ಸೋಂಕಿತರ ಪೈಕಿ 78,19,887 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ದೇಶದಲ್ಲಿ ಇನ್ನೂ 5,16,632 ಮಂದಿ ಸೋಂಕಿತರು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದು ಬಂದಿದೆ.










