ಮೂಡಿಗೆರೆ : ಕಾಫಿ ಡೇ ಮಾಲೀಕ ಸಿದ್ದಾರ್ಥ್ ಹೆಗ್ಡೆ ಅವರ ಪತ್ನಿ ಮಾಳವಿಕಾ ಹೆಗ್ಡೆ ಅವರಿಗೆ ಮೂಡಿಗೆರೆ ಜೆ.ಎಂ.ಎಫ್.ಸಿ ನ್ಯಾಯಾಲಯ ಜಾಮೀನು ಮಂಜೂರು ಮಾಡಿದ್ದಾರೆ. ಕಳೆದ ಎರಡು ದಿನಗಳ ಹಿಂದೆ ಕಾಫಿ ಡೇ ಗ್ಲೋಬಲ್ ಲಿಮಿಟೆಡ್ ನಿಂದ ನೀಡಲಾಗಿದ್ದ ಚೆಕ್ ಬೌನ್ಸ್ ಆಗಿದೆ ಎಂದು ಆರೋಪಿಸಿ ಬೆಳೆಗಾರರು ಎಬಿಸಿ ಕಂಪನಿ ವಿರುದ್ಧ ಕೋರ್ಟ್ ಮೆಟ್ಟಿಲೇರಿದ್ದರು. ಮೂಡಿಗೆರೆಯ ಜೆ.ಎಂ.ಎಫ್.ಸಿ ನ್ಯಾಯಾಲಯ ಕಾಫಿ ಡೇ ಗ್ಲೋಬಲ್ ಲಿಮಿಟೆಡ್ ನ ನಿರ್ದೇಶಕಿ ಮಾಳವಿಕಾ ಹೆಗ್ಡೆ ಅವರು ಸೇರಿದಂತೆ 8 ಮಂದಿಗೆ ನೊಟೀಸ್ ಜಾರಿ ಮಾಡಿತ್ತು. ಆದರೆ ಇವರು ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದ ಹಿನ್ನೆಲೆ, ನ್ಯಾಯಾಲಯ ಅರೆಸ್ಟ್ ವಾರೆಂಟ್ ಜಾರಿ ಮಾಡಿತ್ತು. ಈ ಹಿನ್ನೆಲೆ, ನ್ಯಾಯಾಲಯಕ್ಕೆ ಹಾಜರಾದ ಮಾಳವಿಕಾ ಅವರು ಸೇರಿದಂತೆ 6 ಮಂದಿಗೆ ಮೂಡಿಗೆರೆಯ ಜೆ.ಎಂ.ಎಫ್.ಸಿ. ನ್ಯಾಯಾಲಯ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ.










