ಶೋಪಿಯಾನ್ ಎನ್‍ಕೌಂಟರ್ : ಇಬ್ಬರು ಉಗ್ರರನ್ನು ಸದೆಬಡಿದ ಸೇನೆ…

122
firstsuddi

ಶ್ರೀನಗರ : ಯೋಧರು ಹಾಗೂ ಉಗ್ರರ ನಡುವೆ ಎನ್‍ಕೌಂಟರ್ ನಡೆದಿದ್ದು, ಇಬ್ಬರು ಉಗ್ರರನ್ನು ಹೊಡೆದುರುಳಿಸಲಾಗಿದೆ. ಜಮ್ಮು ಕಾಶ್ಮೀರಾದ ಶೋಪಿಯಾನ್ ಜಿಲ್ಲೆಯ ಕಟ್ ಪೋರಾ ಪ್ರದೇಶಲ್ಲಿ ಉಗ್ರರು ಇರುವುದನ್ನು ತಿಳಿದ ಯೋಧರು ಕಾರ್ಯಾಚರಣೆಗೆ ಮುಂದಾಗಿದ್ದರು. ಈ ವೇಳೆ ಉಗ್ರರು ಯೋಧರತ್ತ ಗುಂಡಿನ ದಾಳಿ ನಡೆಸಿದ್ದು, ಇದಕ್ಕೆ ಪ್ರತಿಯಾಗಿ ದಾಳಿ ನಡೆಸಿದ ಯೋಧರು ಇಬ್ಬರು ಉಗ್ರರನ್ನು ಹೊಡೆದುರುಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಘಟನಾ ಸ್ಥಳದಲ್ಲಿ ಕಾರ್ಯಾಚರಣೆ ಇನ್ನೂ ಮುಂದುವರೆದಿದೆ.