ದೀಪಾವಳಿ ಹಬ್ಬಕ್ಕೆ ಕೆ.ಎಸ್.ಆರ್.ಟಿ.ಸಿ ವತಿಯಿಂದ ಹೆಚ್ಚುವರಿ ಸಾವಿರ ಬಸ್ ವ್ಯವಸ್ಥೆ…

144
firstsuddi

ಬೆಂಗಳೂರು : ದೀಪಾವಳಿ ಹಬ್ಬದ ಅಂಗವಾಗಿ ಪ್ರಯಾಣಿಕರಿಗೆ ಕೆ.ಎಸ್.ಆರ್.ಸಿ. ಸಿಹಿಸುದ್ದಿ ನೀಡಿದ್ದು, ಹೆಚ್ಚುವರಿಯಾಗಿ ಸಾವಿರ ಬಸ್‍ಗಳನ್ನು ಬಿಡಲು ನಿರ್ಧಾರ ಮಾಡಲಾಗಿದೆ. ಪ್ರತಿ ವರ್ಷ ಹಬ್ಬ ಹಾಗೂ ವೀಕೆಂಡ್ ವೇಳೆ ಕೆ.ಎಸ್.ಆರ್.ಟಿ.ಸಿ. 20% ದರವನ್ನು ಹೆಚ್ಚಿಸುತ್ತಿತ್ತು. ಆದರೆ ಈ ಬಾರಿ ಹಬ್ಬದ ಸಮಯದಲ್ಲಿ ಹೆಚ್ಚುವರಿ ಹಣ ಪಡೆಯುವುದನ್ನು ನಿಲ್ಲಿಸಿದ್ದು, ಪ್ರಯಾಣಿಕರು ಪ್ರತಿದಿನ ನೀಡುತ್ತಿದ್ದ ದರವನ್ನು ನೀಡಿ ಪ್ರಯಾಣಿಸಬಹುದು ಎಂದು ತಿಳಿಸಿದೆ.
13/11/2020 ಹಾಗೂ 14/11/2020 ರಂದು ಬೆಂಗಳೂರಿನ ಕೆಂಪೇಗೌಡ ಬಸ್ ನಿಲ್ದಾಣದಿಂದ ಧರ್ಮಸ್ಥಳ, ಶಿವಮೊಗ್ಗ, ಹಾಸನ, ಕುಕ್ಕೆಸುಬ್ರಹ್ಮಣ್ಯ, ಕುಂದಾಪುರ, ಹೊರನಾಡು, ಶೃಂಗೇರಿ, ಮಂಗಳೂರು, ಧಾರವಾಡ, ಹುಬ್ಬಳ್ಳಿ, ಬೆಳಗಾವಿ, ದಾವಣಗೆರೆ, ತಿರುಪತಿ, ಬೀದರ್, ಕೊಪ್ಪಳ, ಯಾದಗಿರಿ, ರಾಯಚೂರು, ಕಲಬುರಗಿ ಕಾರವಾರ, ವಿಜಯಪುರ, ಗೋಕರ್ಣ ಹಾಗೂ ಮೈಸೂರು ರಸ್ತೆ ಬಸ್ ನಿಲ್ದಾಣದಿಂದ ಮೈಸೂರು ಮಡಿಕೇರಿ, ಕುಶಾಲನಗರ, ಪಿರಿಯಾಪಟ್ಟಣ, ಹುಣಸೂರು, ವಿರಾಜಪೇಟೆ ಹಾಗೂ ಶಾಂತಿನಗರ ಬಿ.ಎಂ.ಟಿ.ಸಿ ಬಸ್ ನಿಲ್ದಾಣದಿಂದ ಕೇರಳದ ತಿರುವನಂತಪುರಂ, ಕೊಟ್ಟಾಯಂ, ಆಂಧ್ರಪ್ರದೇಶ/ತೆಲಂಗಾಣ ಹಾಗೂ ಹೈದರಾಬಾದ್ ಗೆ ಹೆಚ್ಚುವರಿ ಬಸ್ ವ್ಯವಸ್ಥೆ ಮಾಡಲಾಗಿದೆ.