ಅರ್ನಾಬ್ ಗೋಸ್ವಾಮಿ ಅವರಿಗೆ ಸುಪ್ರೀಂ ಕೋರ್ಟ್‍ನಿಂದ ಮಧ್ಯಂತರ ಜಾಮೀನು ಮಂಜೂರು…

120
firstsuddi

ನವದೆಹಲಿ : ಆತ್ಮಹತ್ಯೆಗೆ ಪ್ರಚೋದನೆ ಆರೋಪದಲ್ಲಿ ಬಂಧಿತರಾಗಿದ್ದ ರಿಪಬ್ಲಿಕ್ ಟಿವಿ ಮುಖ್ಯ ಸಂಪಾದಕ ಅರ್ನಾಬ್ ಗೋಸ್ವಾಮಿ ಅವರಿಗೆ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ನೀಡಿ ಆದೇಶ ಹೊರಡಿಸಿದೆ. ಮೇ 2018ರಲ್ಲಿ ಇಂಟೀರಿಯರ್ ಡಿಸೈನರ್ ಅನ್ವಯ್ ನಾಯಕ್ ಅವರ ಆತ್ಮಹತ್ಯೆಗೆ ಅರ್ನಾಬ್ ಗೋಸ್ವಾಮಿ ಅವರು ಪ್ರಚೋದನೆ ನೀಡಿದ್ದಾರೆ ಎಂಬ ಆರೋಪದ ಮೇಲೆ ಮಹಾರಾಷ್ಟ್ರ ಪೊಲೀಸರು ಅರ್ನಾಬ್ ಗೋಸ್ವಾಮಿ ಅವರನ್ನು ಬಂಧಿಸಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವೀಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆ ನಡೆಸಿದ ನ್ಯಾ. ಡಿ. ವೈ ಚಂದ್ರಚೂಡ್ ಹಾಗೂ ಇಂದಿರಾ ಬ್ಯಾನರ್ಜಿ ಅವವ ನೇತೃತ್ವದ ಪೀಠ ಅರ್ನಾಬ್ ಗೋಸ್ವಾಮಿ ಹಾಗೂ ಇನ್ನಿಬ್ಬರು ಆರೋಪಿಗಳಿಗೆ 50,000 ರೂಗಳ ವೈಯಕ್ತಿಕ ಬಾಂಡ್ ಮೇಲೆ ಮಧ್ಯಂತರ ಜಾಮೀನು ನೀಡಿ ಸುಪ್ರೀಂ ಕೋರ್ಟ್ ಆದೇಶ ಹೊರಡಿಸಿದೆ.