ಮೈಸೂರು : ಪೊಲೀಸ್ ಜೀಪೊಂದು ಮರಕ್ಕೆ ಡಿಕ್ಕಿ ಹೊಡೆದು ಇಬ್ಬರು ಪೊಲೀಸರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಕೆ.ಆರ್. ನಗರ ತಾಲ್ಲೂಕಿನ ಸಿದ್ದನಕೊಪ್ಪಲು ಗೇಟ್ ಬಳಿ ನಡೆದಿದೆ. ಮೃತ ಪೊಲೀಸರನ್ನು ಎಎಸ್‍ಐ ಮೂರ್ತಿ ಹಾಗೂ ಹೆಚ್‍ಸಿ ಶಾಂತಕುಮಾರ್ ಎಂದು ಗುರುತಿಸಲಾಗಿದೆ. ಪೊಲೀಸರು ನಿನ್ನೆ ತಡರಾತ್ರಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಸಿದ್ದಯ್ಯನ ಕೊಪ್ಪಲು ಗೇಟ್ ಸಮೀಪ ಚಾಲಕನ ನಿಯಂತ್ರಣ ತಪ್ಪಿ ಜೀಪ್ ಮರಕ್ಕೆ ಡಿಕ್ಕಿ ಹೊಡೆದಿದ್ದು, ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಇಬ್ಬರ ಮೃತದೇಹವನ್ನು ಕೆ.ಆರ್. ನಗರ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಲಾಗಿದೆ. ಈ ಕುರಿತು ಕೆ.ಆರ್. ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.










