ಬೈಕ್ ಚಲಾಯಿಸುತ್ತಿದ್ದ ವೇಳೆ ಹೃದಯಾಘಾತ-ವ್ಯಕ್ತಿ ಸ್ಥಳದಲ್ಲೇ ಸಾವು…

134
firstsuddi

ಶಿವಮೊಗ್ಗ : ಬೈಕ್ ಚಲಾಯಿಸುತ್ತಿದ್ದ ವೇಳೆ ಹೃದಯಾಘಾತವಾಗಿ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಗರದ ಹೊರವಲಯದ ಹರಿಗೆ ಎಂಬಲ್ಲಿ ನಡೆದಿದೆ. ಭದ್ರಾವತಿ ತಾಲ್ಲೂಕಿನ ಸಿದ್ಲಿಪುರ ನಿವಾಸಿ ಸುನೀಲ್(38) ಮೃತ ದುರ್ದೈವಿ. ಮಾಚೇನಹಳ್ಳಿ ಕಾರ್ಖಾನೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಸುನೀಲ್ ಅವರು ಇಂದು ಬೆಳಿಗ್ಗೆ ತಮ್ಮ ದ್ವಿಚಕ್ರ ವಾಹನದಲ್ಲಿ ಶಿವಮೊಗ್ಗ-ಭದ್ರಾವತಿ ಮಾರ್ಗ ಮಧ್ಯದಲ್ಲಿ ಚಲಿಸುತ್ತಿದ್ದ ವೇಳೆ ಹೃದಯಾಘಾತ ಸಂಭವಿಸಿ ಬೈಕ್‍ನಿಂದ ಕೆಳಗೆ ಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ತುಂಗಾ ನಗರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.